ಬೆಳಗಾವಿ : ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಗೆ ಉಪಮುಖ್ಯಮಂತ್ರಿ ಹುದ್ದೆ ಲಭಿಸಲಿದೆಯಾ?. ಸಧ್ಯ ಈ ರೀತಿಯ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿವೆ.
ಹೌದು ಡಿ.ಕೆ ಶಿವಕುಮಾರ್ ಸಂಪುಟದಲ್ಲಿ ಸತೀಶ್ ಜಾರಕಿಹೊಳಿ ಅವರಿಗೆ ಡಿಸಿಎಂ ಹುದ್ದೆ ಸಿಗಲಿದೆ ಎಂಬ ಚರ್ಚೆ ಕಾಂಗ್ರೆಸ್ ವಲಯದಲ್ಲಿ ಜೋರಾಗಿದೆ. ಈ ನಡುವೆ ಎರಡು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸಲು ಸಿಎಂ ಹೈಕಮಾಂಡ್ ನಾಯಕರ ಬಳಿ ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ಈಗಾಗಲೇ ಕಂದಾಯ ಸಚಿವ ಡಾ. ಜಿ.ಪರಮೇಶ್ವರ ಅವರನ್ನು ಉಪಮುಖ್ಯಮಂತ್ರಿ ಮಾಡಿದ್ದು, ಇನ್ನುಳಿದಂತೆ ಲಿಂಗಾಯತ ಸಮಯದಿಂದ ಎಂ.ಬಿ ಪಾಟೀಲ್ ಹಾಗೂ ಎಸ್ಟಿ ಸಮುದಾಯದಿಂದ ಸತೀಶ್ ಜಾರಕಿಹೊಳಿ ಆಯ್ಕೆ ಸಾಧ್ಯತೆ ಇದೆ.
ಡಿಸಿಎಂ ಆಯ್ಕೆ ವಿಚಾರವಾಗಿ ಹೈಕಮಾಂಡ್ ತಗೆದುಕೊಳ್ಳುವ ನಿರ್ಧಾರ ಅಂತಿಮ ಎಂದು ಹೇಳಲಾಗುತ್ತಿದೆ. ಜೊತೆಗೆ ರಾಹುಲ್ ಗಾಂಧಿ ಅವರು ಈ ಕುರಿತು ತಮ್ಮ ಸೂಚನೆಗಳನ್ನು ನೀಡಲಿದ್ದಾರೆ.
ಸಂಪುಟ ವಿಸ್ತರಣೆ ನಾಡಿದ್ದು ಸೋಮವಾರ ಬಹುತೇಕ ಫಿಕ್ಸ್ ಆಗಿದೆ. ಇನ್ನೂ ಯಾರೆಲ್ಲ ಸಚಿವರಾಗುತ್ತಾರೆ ಎಂಬ ಕುತೂಹಲ ಎಲ್ಲೆಡೆ ಇದ್ದು ನಾಳೆ ಸಂಜೆ ಇದಕ್ಕೆ ತೆರೆ ಬೀಳುವ ಸಾಧ್ಯತೆ ದಟ್ಟವಾಗಿದೆ.



