ಬೆಳಗಾವಿ : ಕಬ್ಬು ಬೆಳೆಗಾರರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಸಂಘಟನೆ ನೇತೃದಲ್ಲಿ ಹುಬ್ಬಳ್ಳಿ ಚಲೋ ಪಾದಯಾತ್ರೆ ಮುಂದುವರಿದಿದ್ದು ಶನಿವಾರ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ರೈತರ ಸಭೆ ವಿಫಲವಾದ ಹಿನ್ನೆಲೆಯಲ್ಲಿ ಪ್ರತಿಭಟನೆ ಮುಂದುವರಿಸುವ ನಿರ್ಧಾರಕ್ಕೆ ರೈತರು ನಿರ್ಧರಿಸಿದ್ದಾರೆ.
ಪ್ರತಿ ಟನ್ ಕಬ್ಬಿಗೆ 5,500 ರೂ. ನಿಗದಿ ಮಾಡಬೇಕು. ಸಕ್ಕರೆ ಮೇಲಿನ ಎಮ್ಎಸ್ ಪಿ ದರ 60 ರೂ. ಗೆ ಹರಿಸಬೇಕು ಜೊತೆಗೆ ರಾಜ್ಯದಿಂದ ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್ ಖರೀದಿ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಕೇಂದ್ರ ಸರ್ಕಾರದ ಭಾನುವಾರ ಮಧ್ಯಾಹ್ನದ ವರೆಗೆ ಸ್ಪಂದಿಸಬೇಕು. ಇಲ್ಲವಾದರೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಮನೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ ಎಂದು ರೈತ ಸಂಘಟನೆ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
ಶನಿವಾರ ಕಿತ್ತೂರು ಪಟ್ಟಣದಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರೈತರ ಬೇಡಿಕೆಯಂತೆ ಪ್ರತಿ ಟನ್ ಕಬ್ಬಿಗೆ ಒಂದು ಸಾವಿರ ರೂ. ಬೆಂಬಲ ಬೆಲೆ ಘೋಷಣೆ ಮಾಡುವಂತೆ ರೈತರು ಆಗ್ರಹಿಸಿದರು. ಈ ವೇಳೆ ಸಿಎಂ ಬೆಳಗಾವಿಯಲ್ಲಿ ಸಚಿವರು ಹಾಗೂ ಅಧಿಕಾರಿಗಳ ಸಭೆ ಕರೆದು ಚರ್ಚಿಸಲಾಗುತ್ತದೆ ಎಂದು ತಿಳಿಸಿದರು. ಇದಕ್ಕೆ ಒಪ್ಪದ ರೈತರು ನಮ್ಮ ನಿರ್ಧಾರಗಳಿಂದ ಹಿಂದೆ ಸರಿಯುವುದಿಲ್ಲ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ನಮ್ಮ ಬೇಡಿಕೆ ಈಡೇರಿಸುವವರೆಗೆ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.
*********
ಕಿತ್ತೂರು ಹಸಿರುಮಯ : ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರೈತ ಸಂಘಟನೆ ನಡೆಸುತ್ತಿರುವ ಹುಬ್ಬಳ್ಳಿ ಚಲೋ ಪ್ರತಿಭಟನೆಯ ನಾಲ್ಕನೇ ದಿನವಾದ ಶನಿವಾರ ಕಿತ್ತೂರು ಚನ್ನಮ್ಮ ಪಟ್ಟಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ರೈತರು ಪಾಲ್ಗೊಂಡಿದ್ದರು. ಸಿಎಂ ಡಿ.ಕೆ ಶಿವಕುಮಾರ್ ಅವರು ಖುದ್ದು ರೈತರ ಸಮಸ್ಯೆ ಆಲಿಸಿಲು ಬೆಂಗಳೂರಿನಿಂದ ಆಗಮಿಸಿದ್ದ ಹಿನ್ನೆಲೆಯಲ್ಲಿ ಪರಿಹಾರದ ನಿರೀಕ್ಷೆಯಲ್ಲಿದ್ದ ರೈತರು ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದರು. ರಾಜ್ಯ ಸರಕಾರ ಪ್ರತಿ ಟನ್ ಕಬ್ಬಿಗೆ ಒಂದು ಸಾವಿರ ರೂ. ಬೆಂಬಲ ಬೆಲೆ ನೀಡುತ್ತದೆ ಎಂಬ ವಿಶ್ವಾಸದಲ್ಲಿದ್ದ ರೈತರಿಗೆ ಸಿಎಂ ಸಭೆ ನಿರಾಸೆ ಉಂಟುಮಾಡಿತು.
**************
ಬಾಕ್ಸ್ :::
ಸಮಸ್ಯೆ ಬಗೆಹರಿಸದಿದ್ದರೆ ಸಚಿವ ಜೋಶಿ ಮನೆ ಮುತ್ತಿದೆ : ರೈತರ ಪ್ರಮುಖ ಬೇಡಿಕೆಯಾದ ಸಕ್ಕರೆಯ ಎಂಎಸ್ ಪಿ ಬೆಲೆ ಹೆಚ್ಚಳ ಹಾಗೂ ರಾಜ್ಯದಿಂದ ಎಥೆನಾಲ್ ಖರೀದಿ ಪ್ರಮಾಣ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಭಾನುವಾರ ಮಧ್ಯಾಹ್ನ ಈಡೇರಿಸಬೇಕು. ಇಲ್ಲವಾದರೆ ಲಕ್ಷಾಂತರ ಸಂಖ್ಯೆಯಲ್ಲಿ ರೈತರು ಕಿತ್ತೂರಿನಿಂದ ಪಾದಯಾತ್ರೆ ಮೂಲಕ ಹುಬ್ಬಳ್ಳಿಯಲ್ಲಿರುವ ಪ್ರಹ್ಲಾದ ಜೋಶಿ ಅವರ ಮನೆ ಮುತ್ತಿಗೆ ಹಾಕಲಾಗುತ್ತದೆ. ಈ ಕುರಿತು ರೈತರು ಹೋರಾಟ ಮುಂದುವರಿಸುವ ನಿರ್ಧಾರ ಮಾಡಿದ್ದು ಮುಂದೆ ಆಗುವ ಅನಾಹುತಕ್ಕೆ ಸರ್ಕಾರವೇ ಹೊಣೆ ಎಂದು ರೈತ ಸಂಘಟನೆ ಎಚ್ಚರಿಸಿದೆ.




