ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಪ್ರಾರಂಭ
ಬೆಳಗಾವಿ : ತೀವ್ರ ಕುತೂಹಲ ಮೂಡಿಸಿರುವ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಮೊದಲ ಸುತ್ತಿನ ಮತ ಎಣಿಕೆ ಕಾರ್ಯ ನಡೆಯುತ್ತಿದೆ.
ಚುನಾವಣಾ ಅಧಿಕಾರಿ ಎಂ.ಜಿ ಹಿರೇಮಠ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂ ತೆರೆಯಲಾಗಿದ್ದು ಮತ ಪಟ್ಟಿಗಳನ್ನು ಎಣಿಕೆ ಕೇಂದ್ರಕ್ಕೆ ತರಲಾಯಿತು. ನಗರದ ಬಿ ಕೆ ಮಾಡೆಲ್ ಶಾಲೆಯಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.