ರಸ್ತೆ ಅಪಘಾತ : ಬೆಳಗಾವಿಯ ಇಬ್ಬರು ಯುವಕರು ಸಾವು
ಬೆಳಗಾವಿ : ನಗರದ ದಾಬಾವೊಂದರಲ್ಲಿ ಊಟ ಮುಗಿಸಿಕೊಂಡು ನಗರಕ್ಕೆ ಹಿಂದುರುಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಪಿಬಿ ರಸ್ತೆಯ ರಾಷ್ಟ್ರೀಯ ಹೆದ್ದಾರಿ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಇಬ್ಬರೂ ಮೃತಪಟ್ಟ ಘಟನೆ ಬುಧವಾರ ತಡರಾತ್ರಿ ನಡೆದಿದೆ.
ಸದಾಶಿವ ನಗರದ ರಚಿತ ಡುಮಾವತ (21), ಚವಾಟಗಲ್ಲಿಯ ಶ್ರೀನಾಥ ಪವಾರ್ (20) ಮೃತಪಟ್ಟ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಇಬ್ಬರು ಸ್ನೇಹಿತರ ಜೊತೆ ಊಟಕ್ಕೆ ದಾಬಾಕ್ಕೆ ತೆರಳಿದ್ದರು. ಊಟ ಮುಗಿಸಿ ಮನೆಗೆ ಹಿಂದಿರುಗುವಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತ ಲಾರಿಗೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ವಿದ್ಯಾರ್ಥಿಗಳು ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ.
ಈ ಕುರಿತು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.