
ಚಿಕ್ಕೋಡಿ-ಬೈಕ್ ಕಳೆದುಕೊಂಡವರು ನೋಡಲೇಬೇಕಾದ ಸುದ್ದಿ, 41 ಬೈಕ್ ಜಪ್ತಿ

ಚಿಕ್ಕೋಡಿ: ಮಹಾರಾಷ್ಟ್ರ ಮತ್ತು ಕರ್ನಾಟಕದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿ 41ಬೈಕ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಎಸ್ಪಿ ಡಾ.ಸಂಜೀವ್ ಪಾಟೀಲ ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಬೈಕ್ ಕಳ್ಳತನ ಬಗ್ಗೆ ದೂರು ದಾಖಲಾಗಿತ್ತು. ದೂರ ದಾಖಲಿಸಿಕೊಂಡ ನಿಪ್ಪಾಣಿ ಸಿಪಿಐ ಸಂಗಮೇಶ ಶಿವಯೋಗಿ ನೇತೃತ್ವದ ತಂಡ ಆರೋಪಿಗಳ ಪತ್ತೆಗೆ ಬಲೆಬೀಸಿದ್ದರು.

ಈ ವೇಳೆ ಓರ್ವ ಆರೋಪಿಯನ್ನ ನಿಪ್ಪಾಣಿ ತಾಲೂಕಿನ ಅಪ್ಪಚಿವಾಡಿ ಗ್ರಾಮದಲ್ಲಿ ಬಂಧಿಸಿದ್ದರು.ಬಳಿಕ ಆರೋಪಿಯನ್ನ ವಿಚಾರಣೆ ನಡೆಸಿದಾಗ ಬೈಕ್ ಕಳ್ಳತನ ಪ್ರಕರಣದಲ್ಲಿ ನಾಲ್ವರು ಆರೋಪಿಗಳು ಇರುವುದಾಗಿ ಗೊತ್ತಾಗಿದೆ.ಬಳಿಕ ನಾಲ್ವರು ಆರೋಪಿಗಳನ್ನ ಬಂಧಿಸಿದ ನಿಪ್ಪಾಣಿ ಪೊಲೀಸರು 24ಲಕ್ಷ ರೂ.ಗಳ ಮೌಲ್ಯದ 41ಬೈಕ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತನಿಖೆ ಮುಂದುವರೆದಿದೆ ಎಂದು ಎಸ್ಪಿ ಡಾ.ಸಂಜೀವ್ ಪಾಟೀಲ ತಿಳಿಸಿದ್ದಾರೆ.