ಭೀಕರ ರಸ್ತೆ ಅಪಘಾತದಲ್ಲಿ IAS ಅಧಿಕಾರಿ ಮಹಾಂತೇಶ್ ಬೀಳಗಿ ನಿಧನ

ವಿಜಯಪುರ : ಭೀಕರ ರಸ್ತೆ ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಮೃತಪಟ್ಟಿದ್ದಾರೆ.
ವಿಜಯಪುರ ಜಿಲ್ಲೆಯಿಂದ ಕಲಬುರಗಿಯತ್ತ ಕಾರಿನಲ್ಲಿ ಬರುವಾಗ ಜೇವರ್ಗಿ ತಾಲೂಕಿನ ಗೌನಳ್ಳಿ ಬಳಿ ದುರಂತ ಸಂಭವಿಸಿದೆ. ಕಾರಿನಲ್ಲಿದ್ದ ಇತರ ಮೂವರು ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ.
ಈ ಮೊದಲು ದಾವಣಗೆರೆ ಜಿಲ್ಲಾಧಿಕಾರಿಯಾಗಿದ್ದ ಇವರು ಪ್ರಸ್ತುತ ಬೆಸ್ಕಾಂ ಎಂಡಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿ ದುರ್ಘಟನೆ ಸಂಭವಿಸಿದೆ.


