
ಅಥಣಿಯಲ್ಲಿ ಬೀಸನಕೊಪ್ಪ ಮಿಂಚಿನ ಸಂಚಾರ : ಭರ್ಜರಿ ಪ್ರಚಾರದಲ್ಲಿ ತೊಡಗಿದ ಮಾಜಿ ಪೊಲೀಸ್ ಅಧಿಕಾರಿ

ಅಥಣಿ : ಪೊಲೀಸ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಥಣಿ ಮತಕ್ಷೇತ್ರದಲ್ಲಿ ಚುನಾವಣೆ ಸ್ಪರ್ಧೆಗೆ ಇಳಿದಿರುವ ಬಸವರಾಜ ಬೀಸನಕೊಪ್ಪ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಕ್ಷೇತ್ರದ ತುಂಬೆಲ್ಲಾ ಸುತ್ರಾಟ ನಡೆಸಿದ್ದು ಮತದಾರರ ಮನ ಗೆಲ್ಲಲು ಕಸರತ್ತು ನಡೆಸಿದ್ದಾರೆ.

ಯುವಕರ ತಂಡ ಕಟ್ಟಿಕೊಂಡು ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿರುವ ಬಸವರಾಜ ಬೀಸನಕೊಪ್ಪ ಮನೆ ಮನೆಗೆ ತೆರಳಿ ಜನರ ಆಶಿರ್ವಾದ ಪಡೆಯುತ್ತಿದ್ದಾರೆ. ತಾಲೂಕಿನ ಸಪ್ತಸಾಗರ, ನದಿ ಇಂಗಳಗಾಂವ, ರದೂರ, ಕವಟಕೊಪ್ಪ ಸೇರಿದಂತೆ ಅನೇಕ ಗ್ರಾಮಗಳಿಗೆ ತೆರಳಿ ಮತಯಾಚನೆ ಮಾಡುತ್ತಿದ್ದಾರೆ.

ಈಗಾಗಲೇ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು ಚುನಾವಣೆ ಟಿಕೆಟ್ ಗಾಗಿ ಜಾತಕ ಪಕ್ಷಿಯಂತೆ ಕಾಯುತ್ತಿರುವ ಈ ಸಂದರ್ಭದಲ್ಲಿ ಕ್ಷೇತ್ರಕ್ಕೆ ಲಗ್ಗೆ ಇಟ್ಟಿರುವ ಬೀಸನಕೊಪ್ಪ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು ರಾಷ್ಟ್ರೀಯ ಪಕ್ಷಗಳಿಗೆ ತಲೆನೋವಾಗಿ ಪರಿಣಮಿಸಿದೆ.