195 ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ನವದೆಹಲಿ : ಮುಂಬರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಹೈಕಮಾಂಡ್ 195 ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.
ವಾರಾಣಸಿ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ, ಗುಜರಾತ್ ಗಾಂಧಿ ನಗರದಿಂದ ಗೃಹ ಸಚಿವ ಅಮಿತ್ ಶಾ ಹಾಗೂ ಅಮೇಥಿ ಯಿಂದ ಸ್ಮೃತಿ ಇರಾನಿ ಕಣಕ್ಕೆ ಇಳಿಯಲಿದ್ದಾರೆ.
ಮಥುರಾ ದಿಂದ ಹೇಮಾ ಮಾಲಿನಿ, ಫತೇಪುರದಿಂದ – ಸಾಧ್ವಿ ನಿರಂಜನ ಜ್ಯೋತಿ, ಬಂಡಿ ಸಂಜಯ್ ಅವರಿಗೆ ಕರೀಂ ನಗರ್ ಕ್ಷೇತ್ರದಲ್ಲಿ ಟಿಕೆಟ್ ನೀಡಲಾಗಿದೆ.
ಕರ್ನಾಟಕದ ಯಾವುದೇ ಕ್ಷೇತ್ರಕ್ಕೂ ಅಭ್ಯರ್ಥಿಗಳನ್ನು ಬಿಜೆಪಿ ಘೋಷಣೆ ಮಾಡಿಲ್ಲ. ಜೆಡಿಎಸ್ ಹಾಗೂ ಬಿಜೆಪಿ ನಡುವಿನ ಮೈತ್ರಿ ಕುರಿತು ಮಾತುಕತೆ ಬಾಕಿ ಇದ್ದು ಮುಂಬರುವ ದಿನಗಳಲ್ಲಿ ಅಭ್ಯರ್ಥಿ ಆಯ್ಕೆ ನಡೆಯುವ ಸಾಧ್ಯತೆ ಇದೆ.

