Select Page

ಯತ್ನಾಳ್ ಕೈಗೆ ಬಂದ ತುತ್ತು ತಪ್ಪಲಿದೆಯಾ…? ಯಾರಿಗೆ ಬಿಜೆಪಿ ವಿಪಕ್ಷ ನಾಯಕನ ಪಟ್ಟ..!

ಯತ್ನಾಳ್ ಕೈಗೆ ಬಂದ ತುತ್ತು ತಪ್ಪಲಿದೆಯಾ…? ಯಾರಿಗೆ ಬಿಜೆಪಿ ವಿಪಕ್ಷ ನಾಯಕನ ಪಟ್ಟ..!

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಸಧ್ಯ ಬಿಜೆಪಿ ಪಕ್ಷದಿಂದ ವಿಪಕ್ಷ ನಾಯಕನ ಆಯ್ಕೆ ಯಾರಾಗುತ್ತಾರೆ ಎಂಬ ಕುತೂಹಲ ಮೂಡಿದ್ದು, ಸಧ್ಯ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೆಸರು ಮುಂಚಿನಿಯಲ್ಲಿದೆ.

ಸಧ್ಯ ವಿಪಕ್ಷ ನಾಯಕನ ಸ್ಥಾನಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ‌, ಮಾಜಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿದ್ದ ಸುನೀಲ್ ಕುಮಾರ್ ಹೆಸರು ಕೇಳಿಬಂದಿತ್ತು, ಜೊತೆಗೆ ಅಚ್ಚರಿ ಆಯ್ಕೆಯಾಗುವ ಸಾಧ್ಯತೆಯೂ ಇತ್ತು.

ಈಗಾಗಲೇ ಬಿಜೆಪಿ ಹೈಕಮಾಂಡ್ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ದೆಹಲಿಗೆ ಬರುವಂತೆ ಹೇಳಿದ್ದು ಭಾನುವಾರ ಮಧ್ಯಾಹ್ನ ನಡೆಯುವ ಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ. ವಿಪಕ್ಷ ನಾಯಕನ ಆಯ್ಕೆ ಘೋಷಣೆ ದೆಯಲಿಯಿಂದಲೇ ಘೋಷಣೆ ಆಗುವ ಸಾಧ್ಯತೆ ದಟ್ಟವಾಗಿದ್ದು ಸಧ್ಯ ಯಾರಾಗಲಿದ್ದಾರೆ ವಿಪಕ್ಷ ನಾಯಕ ಎಂಬುದು ಕುತೂಹಲ ಮೂಡಿಸಿದೆ.

ಮೂಲಗಳ ಪ್ರಕಾರ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನೇ  ವಿಪಕ್ಷ ನಾಯಕನ್ನಾಗಿ ಆಯ್ಕೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಜೊತೆಗೆ ಯಡಿಯೂರಪ್ಪ ಒಲವು ಕೂಡಾ ಬೊಮ್ಮಾಯಿ ಮೇಲಿದ್ದು ಇದು ಅವರಿಗೆ ಅದೃಷ್ಟ ಒಲಿಯುವಲ್ಲಿ ಸಹಕಾರಿ ಆಗಲಿದೆ. ಜೊತೆಗೆ ನಿರಂತರವಾಗಿ ಯಡಿಯೂರಪ್ಪ ವಿರುದ್ಧ ಕತ್ತಿ ಮಸೆದ ತಂಡಕ್ಕೆ ಹಿನ್ನಡೆಯಾಗುವ ಸಾಧ್ಯತೆ ದಟ್ಟವಾಗಿದೆ.

ಇನ್ನೂ ಮಾಜಿ ಕೇಂದ್ರ ಸಚಿವ ಹಾಗೂ ಹಿಂದೂ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ವಿಪಕ್ಷ ನಾಯಕನ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿ ಇದ್ದರು ಕೊನೆ ಕ್ಷಣದಲ್ಲಿ ಅವರಿಗೆ ಕೈತಪ್ಪುವ ಸಾಧ್ಯತೆ ದಟ್ಟವಾಗಿದೆ. ಕಾರಣ ಸ್ವ ಪಕ್ಷದ ಶಾಸಕರ ವಿರುದ್ಧ ಮಾತನಾಡುವ ಇವರ ಮೇಲೆ ಬಿಜೆಪಿ ಹೈಕಮಾಂಡ್ ಎಚ್ಚರಿಕೆ ನಡೆ ಹೊಂದಿದೆ.

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ನಿರಂತರ ವಾಗ್ದಾಳಿ ನಡೆಸುವ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ವಿಪಕ್ಷ ನಾಯಕನ ಪಟ್ಟ ಸಿಗುವುದು ಅನುಮಾನ ಎಂದು ಹೇಳಲಾಗುತ್ತಿದೆ. ಜೊತೆಗೆ ಎಲ್ಲರಿಗೂ ಸರಿಹೋಗುವ ಅಚ್ಚರಿ ಆಯ್ಕೆ ನಡೆದರು ನಡೆಯಬಹುದು ಎಂದು ಹೇಳಲಾಗುತ್ತಿದೆ.

Advertisement

Leave a reply

Your email address will not be published. Required fields are marked *