ಬಂಡಾಯ ಶಮನಕ್ಕೆ ಜೋಶಿ ಮಹತ್ವದ ಸಭೆ
ಬೆಳಗಾವಿ : ಬೆಳಗಾವಿ ಬಿಜೆಪಿಯಲ್ಲಿ ಎದ್ದಿರುವ ಬಂಡಾಯ ಶಮನಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಹತ್ವದ ಸಭೆ ನಡೆಸಿದರು.
ಭಾನುವಾರ ಸಂಜೆ ಬೆಳಗಾವಿ ಉತ್ತರ ವಲಯದ ಬಿಜೆಪಿ ಕಚೇರಿಯಲ್ಲಿ ಬೆಳಗಾವಿ ಜಿಲ್ಲಾ ಮುಖಂಡರ ಜೊತೆ ಮಹತ್ವದ ಸಭೆ ನಡೆಯಿತು. ಟಿಕೆಟ್ ಹಂಚಿಕೆ ವಿಚಾರವಾಗಿ ನಡೆದ ಗೊಂದಲ ಸರಿಪಡಿಸುವುದು ಹಾಗೂ ಬೆಳಗಾವಿ ಮತ್ತು ಚಿಕ್ಕೋಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸುವ ಉದ್ದೇಶದಿಂದ ನಡೆದ ಸಭೆಯಲ್ಲಿ ಜಿಲ್ಲೆಯ ಹಲವು ಮುಖಂಡರು ಹಾಗೂ ಬಿಜೆಪಿ ಅಭ್ಯರ್ಥಿಗಳು ಭಾಗವಹಿಸಿದ್ದರು.
ಈಗಾಗಲೇ ಟಿಕೆಟ್ ನಿರಾಕಣೆಯಿಂದ ಮುನಿಸಿಕೊಂಡಿದ್ದ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರೆ. ಶಾಸಕ ಮಹಾದೇವಪ್ಪ ಯಾದವಾಡ, ಮುಖಂಡ ಮಾರುತಿ ಅಷ್ಟಗಿ ಸೇರಿದಂತೆ ಅನೇಕರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ. ಬಂಡಾಯ ಶಮನ ಮಾಡುವ ಉದ್ದೇಶದಿಂದ ಪ್ರಹ್ಲಾದ್ ಜೋಶಿ ನೇತೃತ್ವದ ಸಭೆ ಮಹತ್ವದ ಪಡೆದಿದೆ.
ಸಭೆಯಲ್ಲಿ ರಾಜ್ಯವುಪಾಧ್ಯಕ್ಷ ನಿರ್ಮಲ ಕುಮಾರ್ ಸುರಾನಾ, ಸಂಸದೆ ಮಂಗಲಾ ಅಂಗಡಿ, ಈರಣ್ಣಾ ಕಡಾಡಿ, ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ರಮೇಶ್ ಕತ್ತಿ, ಸೇರಿದಂತೆ ಬಿಜೆಪಿ ಅಭ್ಯರ್ಥಿಗಳು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.