
ಪ್ರತ್ಯೇಕ ಪ್ರಕರಣ ಬಿಜೆಪಿಯ ಇಬ್ಬರು ಶಾಸಕರಿಗೆ ಜೈಲು ಶಿಕ್ಷೆ

ಬೆಂಗಳೂರು : ಚಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ಅವರಿಗೆ ನಾಲ್ಕು ವರ್ಷ ಜೈಲುಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ಕೋರ್ಟ್ ತೀರ್ಪು ನೀಡಿದ್ದರೆ. ನಗರಸಭೆ ಕಾಮಗಾರಿಯಲ್ಲಿ ನಕಲಿ ಬಿಲ್ ಸೃಷ್ಟಿಸಿ ಅಕ್ರಮ ಎಸಗಿದ ಆರೋಪದ ಮೇಲೆ ಹಾವೇರಿ ಶಾಸಕ ನೆಹರು ಓಲೆಕಾರ್ ಸೇರಿ ಒಂಬತ್ತು ಜನರಿಗೆ ಕೋರ್ಟ್ ಎರಡು ವರ್ಷ ಜೈಲುಶಿಕ್ಷೆ ವಿಧಿಸಿದೆ.
ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದೆ. ಇಬ್ಬರು ಬಿಜೆಪಿ ಶಾಸಕರಿಗೆ ಕೋರ್ಟ್ ಜೈಲು ಶಿಕ್ಷೆ ವಿಧಿಸಿದೆ. ಹೂವಪ್ಪ ಗೌಡ ಎಂಬುವವರಿಂದ 1.35 ಕೋಟಿಗಳನ್ನು ಶಾಸಕ ಕುಮಾರಸ್ವಾಮಿ ಸಾಲ ಪಡೆದಿದ್ದರು. ಸಾಲ ಮರು ಪಾವತಿಗೆ ನೀಡಿದ್ದ ಎಂಟು ಚಕ್ ಗಳು ಬೌನ್ಸ್ ಆಗಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ಅವರಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
ಹಾವೇರಿ ನಗರಸಭೆ ಕಾಮಗಾರಿ ನಡೆಯದಿದ್ದರು ನಕಲಿ ಬಿಲ್ ಸೃಷ್ಟಿಸಿ ಐದು ಕೋಟಿಗೂ ಅಧಿಕ ಹಣ ಅಕ್ರಮ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿ ಬಿಜೆಪಿ ಶಾಸಕ ನೆಹರು ಓಲೇಕಾರ ಹಾಗೂ ಒಂಬತ್ತು ಮಂದಿಗೆ ಎರಡು ವರ್ಷ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಸಾಮಾಜಿಕ ಕಾರ್ಯಕರ್ತ ಶಶಿಧರ ಹಳ್ಳಿಕೆರಿ ಎಂಬುವವರು ದೂರು ದಾಖಲಸಿದ್ದರು.