ಬಿಜೆಪಿ ಶಾಸಕನಿಗೆ ಸಂಕಷ್ಟ : ಸ್ಪೀಕರ್ ಅನುಮತಿ ಕೋರಿದ ಎಸಿಬಿ
ಬೆಳಗಾವಿ : ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಅಕ್ರಮ ಆಸ್ತಿ ಸಂಪಾದನೆ ಕುರಿತು ಲೋಕಾಯುಕ್ತ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಎಸಿಬಿ ಅಧಿಕಾರಿಗಳು ಪತ್ರ ಬರೆದಿದ್ದಾರೆ.
ಕಳೆದ 2012 ರಲ್ಲಿ ಶಾಸಕ ಅಭಯ ಪಾಟೀಲ ಆಸ್ತಿ ಕಬಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿತ್ತು. 2017ರಲ್ಲಿ ಎಸಿಬಿಗೆ ವರ್ಗಾವಣೆಯಾದರೂ ಇಲ್ಲಿಯವರಗೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿಲ್ಲ. ಕೂಡಲೇ ಎಸಿಬಿಯವರು ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಕೆ ಮಾಡಬೇಕೆಂದು ಆಗ್ರಹಿಸಿದರು.
ಎಸಿಬಿಯಲ್ಲಿ 2017ರಿಂದ ಆ ಪ್ರಕರಣ ದಾಖಲಾದರೂ ಇಲ್ಲಿಯವರೆಗೂ ಎಸಿಬಿಯವರು ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಸಲು ವಿಳಂಬ ಮಾಡಿದ್ದಾರೆ. ನ್ಯಾಯಾಲಯಕ್ಕೆ ಎಸಿಬಿಯವರು ತನಿಖಾ ವರದಿ ಸಲ್ಲಿಸಲು ಮೂರು ತಿಂಗಳುಗಳ ಕಾಲ ಕಾಲಾವಕಾಶ ಕೇಳಿದ್ದರು. ಆ ಅವದಿ ಮುಗಿದಿದೆ. ಶೀಘ್ರದಲ್ಲೇ ಎಸಿಬಿ ಯಾವುದೇ ಪ್ರಭಾವಕ್ಕೆ ಒಳಗಾಗದೆ ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಕೆ ಮಾಡಬೇಕೆಂದು ಸಾಮಾಜಿಕ ಕಾರ್ಯಕರ್ತ ಸುಜೀತ ಮುಳಗುಂದ ಆಗ್ರಹಿಸಿದ್ದರು.
ಇದಕ್ಕೆ ಪ್ರತಿಯಾಗಿ ಎಸಿಬಿ ತನಿಖಾಧಿಕಾರಿಗಳು ಸ್ಪೀಕರ್ ಗೆ ಅಭಯ ಪಾಟೀಲ ಮೇಲೆ ಕ್ರಮ ಕೈಗೊಳ್ಳಲು ಅನುಮತಿ ಕೋರಿದ್ದಾರೆ.