ನಾಳೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ ಮಹೂರ್ತ ಫಿಕ್ಸ್!
ನವದೆಹಲಿ : ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ಮುಕ್ತಾಯವಾಗಿದ್ದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 150 ಕ್ಕೂ ಅಧಿಕ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಚರ್ಚೆ ನಡೆದಿದೆ.
ಸಭೆ ನಂತರ ಮಾಹಿತಿ ನೀಡಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ. ಸಭೆಯಲ್ಲಿ ಅಭ್ಯರ್ಥಿ ಆಯ್ಕೆ ಕುರಿತು ಚರ್ಚೆ ನಡೆದಿದ್ದು ದೊಡ್ಡ ಪ್ರಮಾಣದಲ್ಲಿ ನಾಳೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಘೋಷಣೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ಒಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ಒಂದು ಹಂತದಲ್ಲಿ ಮುಕ್ತಾಯವಾಗಿದ್ದು ಇನ್ನೇನು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಕ್ಷಣ ಗಣನೆ ಆರಂಭವಾಗಿದೆ.