Select Page

Advertisement

ಸರ್ಕಾರದ ವಿರುದ್ಧ ಬಿಜೆಪಿ ರಣಕಹಳೆ ; ಬೃಹತ್ ಪ್ರತಿಭಟನೆ

ಸರ್ಕಾರದ ವಿರುದ್ಧ ಬಿಜೆಪಿ ರಣಕಹಳೆ ; ಬೃಹತ್ ಪ್ರತಿಭಟನೆ

ಬೆಳಗಾವಿ : ವಿಧಾನಸಭೆಯಲ್ಲಿ 18 ಶಾಸಕರ ಅಮಾನತು ಹಾಗೂ ಬಜೆಟ್ ನಲ್ಲಿ ಮುಸ್ಲಿಮರಿಗೆ ಕಾಮಗಾರಿಯಲ್ಲಿ ಮೀಸಲಾತಿ ನೀಡಿರುವ ಕ್ರಮ ವಿರೋಧಿಸಿ ಬೆಳಗಾವಿಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿತು.‌

ರಾಜ್ಯ ಸರಕಾರ ಮುಸ್ಲಿಂ ಪರ‌ ಬಜೆಟ್ ಮಂಡನೆ ಮಾಡಿದೆ. ಹಿಂದೂಗಳಿಗೆ ಇದರಿಂದ ಅನ್ಯಾಯವಾಗಿದೆ. ಹಿಂದುಳಿದ ವರ್ಗಗಳ ಜನರ ಕಲ್ಯಾಣಕ್ಕೆ ಮೀಸಲಿಟ್ಟ ಹಣ ಗ್ಯಾರಂಟಿಗೆ ಬಳಕೆ ಆಗುತ್ತಿದೆ. ರಾಜ್ಯದಲ್ಲಿ ಸಂಪೂರ್ಣವಾಗಿ ಅಭಿವೃದ್ಧಿ ಕುಂಠಿತವಾಗಿದೆ ಎಂದು ಆರೋಪಿಸಿದರು.

ಪ್ರತಿಭಟನೆ ವೇಳೆ ಸಿಎಂ ಸಿದ್ದರಾಮಯ್ಯ ಅವರ ಭಾವಚಿತ್ರ ಇರುವ ಬ್ಯಾನರ್ ಹರಿದು ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು. ಈ ಸಂದರ್ಭದಲ್ಲಿ ಪೊಲೀಸರ ಮಧ್ಯೆ ವಾಗ್ವಾದ ನಡೆಯಿತು. ನಂತರ ರಾಜ್ಯ ಸರಕಾರದ ಕ್ರಮದ ವಿರುದ್ಧ ಆಕ್ರೋಶ ಹೊರಹಾಕಿದರು.

ಬೆಳಗಾವಿ ಗ್ರಾಮೀಣ ಘಟಕದ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್, ನಗರ ಘಟಕದ ಅಧ್ಯಕ್ಷೆ ಗೀತಾ ಸುತಾರ, ಮಾಜಿ ಶಾಸಕ ಸಂಜಯ ಪಾಟೀಲ್, ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಡಾ.ಸೋನಾಲಿ ಸರ್ನೋಬತ್, ಬಿಜೆಪಿ ಮುಖಂಡರಾದ ಮುರುಗೇಂದ್ರಗೌಡ ಪಾಟೀಲ್, ಮಹಾಂತೇಶ್ ವಕ್ಕುಂದ, ದಾದಾಗೌಡ ಬಿರಾದಾರ, ಅಭಯ ಅವಲಕ್ಕಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Advertisement

Leave a reply

Your email address will not be published. Required fields are marked *

error: Content is protected !!