Select Page

Advertisement

ಬೆಳಗಾವಿ : ಬಿಜೆಪಿ ಎಸ್.ಸಿ ಮೋರ್ಚಾ ವತಿಯಿಂದ ರಾಷ್ಟ್ರೀಯ ಸಂವಿಧಾನ ದಿನ ಆಚರಣೆ

ಬೆಳಗಾವಿ : ಬಿಜೆಪಿ ಎಸ್.ಸಿ ಮೋರ್ಚಾ ವತಿಯಿಂದ ರಾಷ್ಟ್ರೀಯ ಸಂವಿಧಾನ ದಿನ ಆಚರಣೆ

ಬೆಳಗಾವಿ : ಬೆಳಗಾವಿ ಮಹಾನಗರ ಎಸ್.ಸಿ ಮೋರ್ಚಾ ವತಿಯಿಂದ ರಾಷ್ಟ್ರೀಯ ಸಂವಿಧಾನ ದಿನದ ಪ್ರಯುಕ್ತ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಆಚರಣೆ ಮಾಡಲಾಯಿತು.

ಶುಕ್ರವಾರ ಹನುಮಾನ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಬೆಳಗಾವಿ ಸಂಸದೆ ಮಂಗಲಾ ಅಂಗಡಿ. ಭಾರತೀಯ ಸಂವಿಧಾನ ಇಡೀ ಜಗತ್ತಿಗೆ ಮಾದರಿಯಾದ ಸಂವಿಧಾನ. ನಮ್ಮ ದೇಶದ ಸರ್ವಧರ್ಮ ಸಮನ್ವಯತೆ ಈ ಸಂವಿಧಾನದಲ್ಲಿ ಅಡಕವಾಗಿದೆ. ಪ್ರತಿಯೊಬ್ಬ ಪ್ರಜೆ ಸಂವಿಧಾನ ಹಾಕಿಕೊಟ್ಟ ದಾರಿಯಲ್ಲಿ ನಡೆಯಬೇಕು ಎಂದರು.

ಈ ಸಂದರ್ಭದಲ್ಲಿ ಬೆಳಗಾವಿ ಮಹಾನಗರ ಜಿಲ್ಲೆ ಎಸ್. ಸಿ. ಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀ ಮಂಜುನಾಥ ಪಮ್ಮಾರ ಪ್ರಾಸ್ತಾವಿಕವಾಗಿ ಮಾತನಾಡಿ. ಅಂಬೇಡ್ಕರ್ ಸಂವಿಧಾನದಿಂದ ಈ ದೇಶದ ದೀನ ದಲಿತರು ಹಾಗೂ ಹಿಂದುಳಿದ ವರ್ಗದವರಿಗೆ ಚೈತನ್ಯ ಲಭಿಸಿದೆ. ಇಂದಿನ ದಿನಮಾನಗಳಲ್ಲಿ ನಾವು ಸಂವಿಧಾನದ ಅದ್ಯಯನ ಜೊತೆಗೆ ಅದರ ಮಾರ್ಗದಲ್ಲಿ ನಡೆದರೆ ಭವ್ಯ ಭಾರತ ಕಟ್ಟುವುದರಲ್ಲಿ ಎರಡು ಮಾತಿಲ್ಲ ಎಂದರು.

ಕಾರ್ಯಕ್ರಮದಲ್ಲಿ ಮಹಾನಗರ ಜಿಲ್ಲೆ  ಪ್ರಭಾರಿ ರಮೇಶ್ ದೇಶಪಾಂಡೆ, ಮಹಾನಗರ ಜಿಲ್ಲಾಧ್ಯಕ್ಷ ಶ್ರೀ ಶಶಿಕಾಂತ್ ಪಾಟೀಲ್, ರಾಜ್ಯ ಕಾರ್ಯದರ್ಶಿ ಉಜ್ವಲಾ ಬಡವನಾಚೆ, ರಾಜ್ಯ ಎಸ್. ಸಿ. ಮೋರ್ಚಾ ಕಾರ್ಯದರ್ಶಿ  ರಾವ್ ಬದ್ದೂರ್ ಕದಂ, ರಾಜ್ಯ ಕಾರ್ಯಕಾರಣಿ ಸದಸ್ಯ  ಪೃಥ್ವಿ ಸಿಂಗ್, ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ನಿರ್ದೇಶಕಿ  ದೀಪಾ ಕುಡಚಿ, ಮಹಾನಗರ ಪ್ರಧಾನ ಕಾರ್ಯದರ್ಶಿ  ದಾದಾಗೌಡ ಬಿರಾದಾರ ಜಿಲ್ಲಾ ಕಾರ್ಯದರ್ಶಿ ಮಹಾಂತೇಶ ವಕ್ಕುಂದ,ನಗರ ಸೇವಕರಾದ ,ಸಂದೀಪ ಜಿರಗ್ಯಾಳ,  ಶ್ರೀಶೈಲ್ ಕಾಂಬ್ಳೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Advertisement

Leave a reply

Your email address will not be published. Required fields are marked *

error: Content is protected !!