ಬ್ಯಾಕ್ ಬಾಕ್ಸ್ ಪತ್ತೆ ; ವಿಮಾನ ದುರಂತದ ಕಾರಣ ಪತ್ತೆಯಾಗುತ್ತಾ…?
ಅಹಮದಾಬಾದ್ : ಗುಜರಾತ್ ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಗುರುವಾರ ಏರ್ ಇಂಡಿಯಾ ವಿಮಾನ ಪತನವಾಗಿದ್ದು, ಒಬ್ಬ ಪ್ರಯಾಣಿಕ ಹೊರತುಪಡಿಸಿ ಉಳಿದ ಎಲ್ಲಾ 241 ಪ್ರಯಾಣಿಕರು ಮತ್ತು ಸಿಬ್ಬಂದಿ ಸೇರಿದಂತೆ ಒಟ್ಟು 265 ಜನ ಮೃತಪಟ್ಟಿದ್ದಾರೆ.
ನಿನ್ನೆ ಪತನಗೊಂಡ ಏರ್ ಇಂಡಿಯಾದ ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನದ ಬ್ಲ್ಯಾಕ್ ಬಾಕ್ಸ್ ಇಂದು ಪತ್ತೆಯಾಗಿದೆ. ಮೂಲಗಳ ಪ್ರಕಾರ, ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ದ ತಂಡ ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್
ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಬಳಿಯ ಜನದಟ್ಟಣೆಯ ಮೇಘನಿನಗರ ಪ್ರದೇಶದಲ್ಲಿ ಒಂದು ಬ್ಲ್ಯಾಕ್ ಬಾಕ್ಸ್ ವಶಪಡಿಸಿಕೊಂಡಿದೆ. ಇಲ್ಲಿಯೇ ಬೋಯಿಂಗ್ 787 ಡ್ರೀಮ್‌ಲೈನರ್ ವಿಮಾನ ಪತನಗೊಂಡಿತ್ತು.


