Select Page

ಬೆಳಗಾವಿ : ರಿಯಲ್ ಎಸ್ಟೇಟ್ ಏಜೆಂಟ್ ಬರ್ಬರ ಹತ್ಯೆ

ಬೆಳಗಾವಿ : ರಿಯಲ್ ಎಸ್ಟೇಟ್ ಏಜೆಂಟ್ ಬರ್ಬರ ಹತ್ಯೆ

ಬೆಳಗಾವಿ : ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಿದ ಘಟನೆ ಶನಿವಾರ ನಡೆದಿದೆ.

ಹೆಂಡತಿ, ಮಕ್ಕಳು ಪಕ್ಕದ ರೂಮ್ ನಲ್ಲಿ ಮಲಗಿದ್ದಾಗಲೇ ಹತ್ಯೆ.‌ ಯಾರಿಗೂ ಗೊತ್ತಾಗದಂತೆ ಕಳೆದ ರಾತ್ರಿ ಮನೆಗೆ ನುಗ್ಗಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ರಿಯಲ್ ಎಸ್ಟೇಟ್ ಏಜೆಂಟ್ ಆಗಿ ಕೆಲಸ ಮಾಡ್ತಿದ್ದ ಸುಧೀರ್ ಕಾಂಬಳೆ(57) ಕೊಲೆಯಾದ ವ್ಯಕ್ತಿ. ಎಂದು ಗುರುತಿಸಲಾಗಿದೆ. ದುಬೈದಿಂದ ಕೊವಿಡ್ ಹಿನ್ನೆಲೆ ಎರಡು ವರ್ಷದ ಹಿಂದೆ ಬೆಳಗಾವಿಗೆ ಬಂದಿದ್ದ ಸುಧೀರ್ ನ ಹೊಟ್ಟೆ, ಕತ್ತು, ಕೈ, ಮುಖಕ್ಕೆ ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.


ಸ್ಥಳಕ್ಕೆ ಕ್ಯಾಂಪ್ ಪೊಲೀಸರು, ಡಿಸಿಪಿ ರವೀಂದ್ರ ಗಡಾದಿ ಭೇಟಿ ಪರಿಶೀಲನೆ. ನಡೆಸಿದ್ದಾರೆ‌. ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಇದಾಗಿದೆ‌.

Advertisement

Leave a reply

Your email address will not be published. Required fields are marked *

error: Content is protected !!