
ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ : ಮರು ಮತದಾನ ಮಾಡುವಂತೆ ಆಗ್ರಹ

ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿ ಗೆಲುವು ಸಾಧಿಸಿದೆ. ಇವಿಎಂ ಮಷಿನ್ ಹ್ಯಾಕ್ ಮಾಡಿರುವ ಅನುಮಾನ ಇದ್ದು ಬ್ಯಾಲೆಟ್ ಪೇಪರ್ ಬಳಸಿ ಮರು ಮತದಾನ ಮಾಡುವಂತೆ ವಿವಿಧ ಪಕ್ಷದ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಬಾಗ ಸೇರಿದ್ದ ಪಾಲಿಕೆ ಅಭ್ಯರ್ಥಿಗಳು ಬಿಜೆಪಿ ವಿರುದ್ಧ ಹರಿಹಾಯ್ದರು. ಇವಿಎಂ ಮಷಿನ್ ನಲ್ಲಿ ಅವ್ಯವಹಾರ ನಡೆದಿದೆ. ಬಿಜೆಪಿ ಇಷ್ಟೊಂದು ಸ್ಥಾನ ಪಡೆಯಲು ಸಾಧ್ಯವಿಲ್ಲ. ಕೂಡಲೇ ಮರು ಮತದಾನ ಮಾಡುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡೆ ಸೀಮಾ ಇನಾಮದಾರ, ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.