ವಿದ್ಯಾರ್ಥಿ ಮೇಲಿನ ಹಲ್ಲೆ ಪ್ರಕರಣ : ನಾಲ್ವರ ವಿರುದ್ಧ ಕೇಸ್ ದಾಖಲು
ಬೆಳಗಾವಿ : ಕನ್ನಡ ಬಾವುಟ ಹಿಡಿದು ಡ್ಯಾನ್ಸ್ ಮಾಡಿದ್ದ ಯುವಕನ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣ ಕುರಿತಾಗಿ ಹಲ್ಲೆ ನಡೆಸಿದ್ದ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಬಾವುಟ ಹಿಡಿದಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ್ದ ನಾಲ್ವರಲ್ಲಿ ಮೂವರು ಅಪ್ರಾಪ್ತರಾಗಿದ್ದು ಒಬ್ಬ ವಿದ್ಯಾರ್ಥಿ ಪ್ರಾಪ್ತನಾಗಿದ್ದಾನೆ. ಹಲ್ಲೆಗೊಳಗಾದ ವಿದ್ಯಾರ್ಥಿ ನಗರದ ತಿಲಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ….!
ಈ ಕುರಿತು ಪ್ರಕಟಣೆ ಹೊರಡಿಸಿರುವ ನಗರ ಪೊಲೀಸ್ ಆಯುಕ್ತ ಡಾ. ಬೋರಲಿಂಗಯ್ಯ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡಿದ್ದು ಕಾಲೇಜು ಹಾಗೂ ನಗರದಲ್ಲಿ ಸೂಕ್ತ ಭದ್ರತೆ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.