Select Page

Advertisement

ನಡು ರಸ್ತೆಯಲ್ಲೇ ಪ್ರಾಣ ಬಿಟ್ಟ ತುಂಬು ಗರ್ಭಿಣಿ

ನಡು ರಸ್ತೆಯಲ್ಲೇ ಪ್ರಾಣ ಬಿಟ್ಟ ತುಂಬು ಗರ್ಭಿಣಿ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಶನಿವಾರ ಘನಘೋರ ದುರಂತ ಸಂಭವಿಸಿದ್ದು, ನಡು ರಸ್ತೆಯಲ್ಲೇ ತುಂಬು ಗರ್ಭಿಣಿ ಪ್ರಾಣಬಿಟ್ಟಿದ್ದಾಳೆ.

ಮೃತರನ್ನು 30 ವರ್ಷದ ಮಾನಸಿಕ ಅಸ್ವಸ್ಥಳಾದ ಗರ್ಭಿಣಿ ರೇಣುಕಾ ಎಂದು ಗುರುತಿಸಲಾಗಿದೆ. ಆಕೆ ಬೀದಿಯಲ್ಲಿ ಶವವಾಗಿ ಕಂಡುಬಂದಿದ್ದಾಳೆ.

ಕೆಲ ದುಷ್ಕರ್ಮಿಗಳು ಆಕೆಯನ್ನು ದೈಹಿಕವಾಗಿ ದುರ್ಬಳಕೆ ಮಾಡಿ ಗರ್ಭಿಣಿಯನ್ನಾಗಿ ಮಾಡಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಮಾನಸಿಕವಾಗಿ ಅಸ್ವಸ್ಥಳಾಗಿದ್ದ ರೇಣುಕಾ, ಶಿಡ್ಲಘಟ್ಟದ ಬೀದಿಗಳಲ್ಲಿ ಅಲೆದಾಡುತ್ತಿದ್ದವಳು. 8 ತಿಂಗಳ ಗರ್ಭಿಣಿಯಾಗಿದ್ದ ಆಕೆ, ಇದೀಗ ರೈಲ್ವೆ ನಿಲ್ದಾಣದ ಬಳಿ ಮಲಗಿದ್ದ ಸ್ಥಿತಿಯಲ್ಲೇ ಮೃತಪಟ್ಟಿದ್ದಾಳೆ.

ರೇಣುಕಾಳ ದಾರುಣ ಅಂತ್ಯವ ಸಮಾಜವನ್ನು ತಲೆತಗ್ಗಿಸುವಂತೆ ಮಾಡಿದೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ರೇಣುಕಾಳ ದೇಹವನ್ನು ಪೋಸ್ಟ್ ಮಾರ್ಟಮ್ ಮಾಡಿ ಶವಸಂಸ್ಕಾರ ನೆರವೇರಿಸಲಾಗಿದೆ.

Advertisement

Leave a reply

Your email address will not be published. Required fields are marked *

error: Content is protected !!