ಕೆಲಸ ಕೊಡಿಸುವುದಾಗಿ ಯುವತಿಯರನ್ನು ವೇಶ್ಯಾವಾಟಿಕೆಗೆ ಮಾರಾಟ ; ಆರೋಪಿಗಳಿಗೆ ಕಾರಾಗೃಹ ಶಿಕ್ಷೆ..!

ಚಿಕ್ಕಬಳ್ಳಾಪುರ : ಕೆಲಸದ ಆಮಿಷ ತೋರಿಸಿ ಹೆಣ್ಣುಮಕ್ಕಳನ್ನು ವೇಶ್ಯಾವಾಟಿಕೆಗೆ ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪರಾಧಿಗಳಿಗೆ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ.
ಚಿಕ್ಕಬಳ್ಳಾಪುರ 1 ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣಕ್ಕೆ ಸಂಬಂಧಿಸಿದ ಮೂವರು ಅಪರಾಧಿಗಳಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ ನೀಡಿ ಆದೇಶ ಹೊರಡಿಸಿದೆ.
2022 ರಂದು ನಡೆದಿದ್ದ ಪ್ರಕರಣದ ಕುರಿತು ನ್ಯಾಯಾಧೀಶ ಎಸ್.ವಿ ಕಾಂತರಾಜು ಅವರು ವಿಚಾರಣೆ ನಡೆಸಿ ತೀರ್ಪು ನೀಡಿದ್ದಾರೆ. ಬ್ಯೂಟಿ ಪಾರ್ಲರ್ ಕೆಲಸ ಕೊಡಿಸುವುದಾಗಿ ಅಮಾಯಕ ಯುವತಿಯರುನ್ನು ನಂಬಿಸಿ ವೇಶ್ಯಾವಾಟಿಕೆಗೆ ತಳ್ಳುವುರು ಇವರ ಕೆಲಸವಾಗಿತ್ತು.
ವೆಂಕಟರವಣಮ್ಮ ಲಕ್ಷ್ಮೀ ನರಸಮ್ಮ ಗೀತಾ, ಪದ್ಮ ಹಾಗೂ ಶಾರಧಾ ಎಂಬ ಮೂವರಿಗೆ ಏಳು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.


