ಭೀಕರ ರಸ್ತೆ ಅಪಘಾತ ; ಇಬ್ಬರು ಸಾವು
ಚಿಕ್ಕೋಡಿ: ಮರಕ್ಕೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ ಘಟನೆ ಶುಕ್ರವಾರ ತಡರಾತ್ರಿ ಇಂಗಳಿ ಯಲ್ಲಿ ಘಟನೆಯಲ್ಲಿ ನಡೆದಿದೆ.
ಪ್ರಭಾಕರ ಘೋಸರವಾಡೆ (45), ಮೋಹನ ಕೋಳಿ (42) ಮೃತಪಟ್ಟಿದ್ದಾರೆ. ನಾಗೇಂದ್ರ ಶಿರಹಟ್ಟಿ ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೆಲಸದ ನಿಮಿತ್ತ ಮೋಟಾರ್ ಸೈಕಲ್ ನಲ್ಲಿ ಇಂಗಳಿಯಿಂದ ಶಿರಗುಪ್ಪಿ ಕಡೆಗೆ ಹೋಗುತ್ತಿರುವಾಗ ಬೈಕ್ ನಿಯಂತ್ರಣ ಕೈ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಹಿಂದೆಗಡೆ ಕುಳಿತಿದ್ದ ಪ್ರಭಾಕರ್ & ಮೋಹನ್ ತಲೆಗೆ ತೀವ್ರ ಪೆಟ್ಟುಬಿದ್ದು ರಕ್ತಸ್ರಾವವಾಗಿದೆ.
ಗಾಯಾಳುಗಳನ್ನು ಚಿಕ್ಕೋಡಿಯ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯುತ್ತಿದ್ದಾಗ ದಾರಿ ಮಧ್ಯೆ ಇಬ್ಬರೂ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಬೈಕ್ ಸವಾರ ನಾಗೇಂದ್ರ ಶಿರಹಟ್ಟಿ ಗಾಯಗೊಂಡಿದ್ದರಿಂದ ಚಿಕ್ಕೋಡಿಯ ಸರ್ಕಾರಿ
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಗೆ ಕಳುಹಿಸಲಾಗಿದೆ. ಈ ಸಂಬಂಧ ಅಂಕಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


