Select Page

Advertisement

ಚಿಕ್ಕೋಡಿ : ಕಾಲೇಜಿಗೆ ಹೋಗುವಂತೆ ತಾಕೀತು ಮಾಡಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ

ಚಿಕ್ಕೋಡಿ : ಕಾಲೇಜಿಗೆ ಹೋಗುವಂತೆ ತಾಕೀತು ಮಾಡಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ


ಚಿಕ್ಕೋಡಿ : ಕಾಲೇಜಿಗೆ ಹೋಗು ಎಂದು ತಂದೆ ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ಯುವ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ.

ಸಾಗರ್ ತುಕಾರಾಂ ಕುರಾಡೆ (20) ಮೃತ ದುರ್ದೈವಿ. ‌ಸದಲಗಾ ಸರಕಾರಿ ಕಾಲೇಜಿನಲ್ಲಿ ಬಿ.ಎ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಯುವಕ ಕೆಲ ದಿನದಿಂದ ಕಾಲೇಜಿಗೆ ಹೋಗಿರಲಿಲ್ಲ. ಈತನ ತಂದೆ ಬುದ್ದಿವಾದ ಹೇಳಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.‌

ಸದಲಗಾ ನಿವಾಸಿಯಾದ ಇವರು ಮೃತ ಯುವಕನ ತಂದೆ ತುಕಾರಾಂ ಕಾರ್ಖಾನೆ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದಾರೆ‌‌. ತಂದೆ ಬುದ್ದಿವಾದ ಹೇಳಿದ್ದಕ್ಕೆ ಯುವಕ ಮನೆಯ ಪಕ್ಕದ ಜಾಗದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸ್ಥಳಕ್ಕೆ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!