![ಕನ್ನಡ ಬಿಗ್ ಬಾಸ್ ನಿಂದ ಐಶ್ವರ್ಯ ಸಿಂಧೋಗಿ ಔಟ್…?](https://belagavivoice.com/wp-content/uploads/2024/12/images-75-150x150.jpeg)
ಶಾಲೆಯಲ್ಲೇ ನೇಣಿಗೆ ಶರಣಾದ ವಿದ್ಯಾರ್ಥಿ
![ಶಾಲೆಯಲ್ಲೇ ನೇಣಿಗೆ ಶರಣಾದ ವಿದ್ಯಾರ್ಥಿ](https://belagavivoice.com/wp-content/uploads/2024/07/images-2024-07-09T095621.705.jpeg)
ಚಿತ್ರದುರ್ಗ : ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿ ಓರ್ವ ಶಾಲೆಯಲ್ಲೇ ನೇಣಿಗೆ ಶರಣಾದ ಘಟನೆ ನಡೆದಿದೆ.
ಸೀನಿಯರ್ ಗಳು ರೇಗಿಸಿದರು ಎಂಬ ಕಾರಣಕ್ಕೆ ಮನನೊಂದ ವಿದ್ಯಾರ್ಥಿಯೋರ್ವ ಶಾಲೆಯಲ್ಲೇ ನೇಣಿಗೆ ಶರಣಾದ ದಾರುಣ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಉಡುವಳ್ಳಿಯ ನವೋದಯ ಶಾಲೆಯಲ್ಲಿ ನಡೆದಿದೆ.
ಮೃತನನ್ನು 8ನೇ ತರಗತಿ ಓದುತ್ತಿದ್ದ ಪ್ರೇಮ್ ಸಾಗರ್ (13) ಎಂದು ಗುತಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಹೊಳಲ್ಕೆರೆ ತಾಲ್ಲೂಕಿನ ಕೆಂಗುಂಟೆ ಗ್ರಾಮದವನು ಎಂದು ತಿಳಿದುಬಂದಿದೆ.
ಸೀನಿಯರ್ ವಿದ್ಯಾರ್ಥಿಗಳು ರೇಗಿಸುತ್ತಿದ್ದರು ಎಂಬ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬುವುದು ಸದ್ಯಕ್ಕೆ ತಿಳಿದು ಬಂದಿರುವ ಪ್ರಾಥಮಿಕ ಮಾಹಿತಿ. ಸದ್ಯ ಈ ಕುರಿತು ಪೋಲಿಸರು ತನಿಖೆ ಚುರುಕುಗೊಳಿಸಿದ್ದು, ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.