Video – ನಡು ರಸ್ತೆಯಲ್ಲೇ ಹೊತ್ತಿ ಉರಿದ ಕಾರು
ಗೋವಾ : ನೆರೆಯ ರಾಜ್ಯ ಗೋವಾದಿಂದ ಬೆಳಗಾವಿಗೆ ಬರುತ್ತಿದ್ದ ಕಾರೊಂದು ನಡು ರಸ್ತೆಯಲ್ಲೇ ಭಯಂಕರವಾಗಿ ಹೊತ್ತಿ ಉರಿದ ಘಟನೆ ಶನಿವಾರ (ದಿ.20) ಬೆಳಗಿನ ಜಾವ ನಡೆದಿದೆ.
ಕಾರು ಸಂಚರಿಸುತ್ತಿದ್ದ ಸಂದರ್ಭದಲ್ಲಿ ಅಚಾನಕ್ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆ ಕಾರು ಸಂಪೂರ್ಣ ಸುಟ್ಟು ಭಸ್ಮವಾಹಿದೆ. ಇನ್ನೂ ಅದೃಷ್ಟವಶಾತ್ ಕಾರಿನಲ್ಲಿ ಇದ್ದವರೆಲ್ಲ ಹೊರ ಓಡಿ ಬಂದಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಸಂದರ್ಭದಲ್ಲಿ ಪ್ರತ್ಯಕ್ಷದರ್ಶಿಗಳು ವೀಡಿಯೋ ಮಾಡಿಕೊಂಡು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ವೀಡಿಯೋದಲ್ಲಿ ಹೇಳಿದಂತೆ ಕಾರು ರಾಜಸ್ಥಾನ ಪಾಸಿಂಗ್ ಹೊಂದಿದ್ದಾಗಿ ತಿಳಿದುಬಂದಿದೆ.
ಗೋವಾದ ಅಂಜುಮನ್ ಡ್ಯಾಂ ಹತ್ತಿರ ಘಟನೆ ನಡೆದಿದ್ದು ಗೋವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.