
ರೈತರ ಸಮಸ್ಯೆಗೆ ಪರಿಹಾರ ನೀಡುವೆ : ಸಿಎಂ ಬೊಮ್ಮಾಯಿ ಅಭಯ

ಬೆಳಗಾವಿ : ಎರಡು ದಿನಗಳ ಕಾಲ ಬೆಳಗಾವಿಯಲ್ಲಿ ವಿವಿಧ ಕಾಮಾಗಾರಿಗಳಿಗೆ ಚಾಲನೆ ನೀಡಲು ಬೆಳಗಾವಿಗೆ ಆಗಮಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ನಗರದ ಪ್ರವಾಸಿ ಮಂದಿರದಲ್ಲಿ ತಾಳ್ಮೆಯಿಂದ ರೈತರ ಸಮಸ್ಯೆಯನ್ನು ಆಲಿಸಿ ಸಮಸ್ಯೆಗೆ ಪರಿಹಾರ ನೀಡುವೆ ಎಂದರು.
ಕೊರೊನಾ ಸಂದರ್ಭದಲ್ಲಿ ರೈತರ ಬದುಕು ಕಸೆದುಕೊಂಡಿದೆ. ಇದರ ನಡುವೆ ಸಕ್ಕರೆ ಕಾರ್ಖಾನೆಗಳಿಗೆ ಕಳುಹಿಸಿದ ಕಬ್ಬಿನ ಬಿಲ್ ಕೆಲ ಸಕ್ಕರೆ ಕಾರ್ಖಾನೆಯವರು ನೀಡದೆ ರೈತರೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ, ರೈತರ ಮೇಲಿನ ಸಾಲಾ ಮನ್ನಾ, ರೈತರು ಬೆಳೆದ ಬೆಲೆಗೆ ಬೆಂಬಲ ಬೆಲೆ ಘೋಷಣೆ ಮಾಡುವುದು ಸೇರಿದಂತೆ ವಿವಿಧ ಸಮಸ್ಯೆಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂದೆ ಇಟ್ಟರು.
ಸಕಾರಾತ್ಮಕವಾಗಿ ತಾಳ್ಮೆಯಿಂದ ಅವರ ಸಮಸ್ಯೆ ಆಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿಮ್ಮ ಸಮಸ್ಯೆಯ ಬಗ್ಗೆ ಬೆಂಗಳೂರಿನಲ್ಲಿ ಸಭೆ ಕರೆದು ಚರ್ಚೆ ನಡೆಸಲಾಗುವುದು ಎಂದು ಭರವಸೆ ನೀಡಿದರು.