Select Page

Advertisement

ಧರ್ಮಸ್ಥಳ – ಸಿಎಂ, ಡಿಸಿಎಂ ಬರುತ್ತಿದ್ದಂತೆ ಮೋದಿ, ಜೈ ಶ್ರೀರಾಮ್ ಘೋಷಣೆ ‌ಕೂಗಿದ ಭಕ್ತರು

ಧರ್ಮಸ್ಥಳ – ಸಿಎಂ, ಡಿಸಿಎಂ ಬರುತ್ತಿದ್ದಂತೆ ಮೋದಿ, ಜೈ ಶ್ರೀರಾಮ್ ಘೋಷಣೆ ‌ಕೂಗಿದ ಭಕ್ತರು

ಧರ್ಮಸ್ಥಳ : ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥನ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ ಧರ್ಮಸ್ಥಳದಲ್ಲಿ ಭಕ್ತರು, ಮೋದಿ, ಮೋದಿ ಹಾಗೂ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನಲೆಯಲ್ಲಿ ಇಂದು ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಧರ್ಮಸ್ಥಳಕ್ಕೆ ಭೇಟಿ ನೀಡಿದರು.

ಮೈಸೂರಿನಿಂದ ವಿಶೇಷ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಣಕ್ಕೆ ತಲುಪಿದ ಮೂವರು, ಅಲ್ಲಿಂದ ರಸ್ತೆ ಮಾರ್ಗದ ಮೂಲಕ ಧರ್ಮಸ್ಥಳಕ್ಕೆ ತೆರಳಿದರು.

ಧರ್ಮಸ್ಥಳ ಪ್ರವೇಶಿಸುತ್ತಿದ್ದಂತೆ, ಪ್ರವೇಶ ದ್ವಾರದ ಬಳಿಯೇ ವಾದ್ಯ ಘೋಷಗಳಿಂದ ಅದ್ಧೂರಿ ಸ್ವಾಗತವನ್ನು ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಗೆ ದೊರೆಯಿತು. ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನವನ್ನು ಸಿಎಂ, ಡಿಸಿಎಂ ಪಡೆದರು. ಈ ವೇಳೆ ಪ್ರವೇಶ ದ್ವಾರದಲ್ಲೇ ನೆರೆದಿದ್ದಂತ ಭಕ್ತರು ಮೋದಿ, ಮೋದಿ ಹಾಗೂ ಜೈ ಶ್ರೀರಾಮ್ ಎಂಬುದಾಗಿ ಘೋಷಣೆ ಕೂಗಿದರು.

ಮಂಜುನಾಥ ಸ್ವಾಮಿಯ ದರ್ಶನದ ಬಳಿಕ ಧರ್ಮಾಧಿಕಾರಿ ವೀರೇಂದ್ರ ಹೆಗ್ಡೆ ಅವರನ್ನು ಭೇಟಿಯಾಗಿ ಕೆಲ ಕಾಲ ಮಾತುಕತೆ ನಡೆಸಿದರು.

Advertisement

Leave a reply

Your email address will not be published. Required fields are marked *

error: Content is protected !!