ಬೆಳಗಾವಿ : ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ಕೊಂಚ ಏರುಪೇರಾದ ಹಿನ್ನಲೆಯಲ್ಲಿ ನಿನ್ನೆಯಿಂದ ಸದನಕ್ಕೆ ಹಾಜರಾಗದೆ ವಿಶ್ರಾಂತಿ ಪಡೆಯುತ್ತಿದ್ದಾರೆ.

ಈ ವರೆಗೂ ಸಿಎಂ ನಗರದ ಪ್ರವಾಸಿ ಮಂದಿರದಲ್ಲಿ ವಿಶ್ರಾಂತಿ ಪಡೆಯುತ್ತಿದ್ದು ಮಧ್ಯಾಹ್ನದ ವೇಳೆಗೆ ಅವರು ಸದನಕ್ಕೆ ಹಾಜರಾಗಿ ಉತ್ತರ ನೀಡುವ ಸಾಧ್ಯತೆ ಇದೆ.

ಈ ಮಧ್ಯೆ ಅಧಿವೇಶನವನ್ನು ಕೆಲ ದಿನ ವಿಸ್ತರಿಸಿ ಸಮಗ್ರ ಚರ್ಚೆಗೆ ಅವಕಾಶ ಕಲ್ಪಿಸುವಂತೆ ವಿಪಕ್ಷ ನಾಯಕ ಆರ್. ಅಶೋಕ್ ಸಿಎಂ ಗೆ ಪತ್ರ ಬರೆದಿದ್ದಾರೆ.