ಅಕ್ಕಿ ಬದಲಿಗೆ ಹಣ ಕೊಡಲು ನಿರ್ಧರಿಸಿದ ಸಿದ್ದು ಸರ್ಕಾರ..!
ಕಾಂಗ್ರೆಸ್ ಸರ್ಕಾರ ಕೊಟ್ಟ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಪ್ರತಿ ಮನೆಗೆ ಹತ್ತು ಕೇಜಿ ಅಕ್ಕಿ ಕೊಡುವ ಯೋಜನೆಗೆ ಆರಂಭದಲ್ಲೇ ವಿಘ್ನ ಉಂಟಾಗಿದ್ದು, ಕೇಂದ್ರದಿಂದ ಅಕ್ಕಿ ಸಿಗದ ಹಿನ್ನಲೆಯಲ್ಲಿ ಪ್ರತಿ ಮನೆ ಬಿಪಿಎಲ್ ಕುಟುಂಬದ ಸದಸ್ಯರಿಗೆ ಹಣ ಕೊಡುವ ನಿರ್ಧಾರಕ್ಕೆ ಬರಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಸುದ್ದಿಘೋಷ್ಠಿ ಉದ್ದೇಶಿಸಿ ಮಾತನಾಡಿದ ಇವರು. ಈಗಾಗಲೇ ನಾವು ನಿರೀಕ್ಷೆ ಮಾಡಿದಷ್ಟು ಅಕ್ಕಿ ಸಿಗದ ಹಿನ್ನಲೆಯಲ್ಲಿ ಗ್ಯಾರಂಟಿ ಯೋಜನೆ ಜಾರಿಗೆ ವಿಳಂಬ ವಾಗಿದ್ದು, ಮೊದಲಿಗೆ ಕೊಟ್ಟ ಮಾತಿನಂತೆ ಬರುವ ತಿಂಗಳು ಕೇಂದ್ರದ ಐದು ಕೇಜಿ ಉಚಿತ ಅಕ್ಕಿ ಜೊತೆ ರಾಜ್ಯ ಸರ್ಕಾರದ ಐದು ಕೇಜಿ ಅಕ್ಕಿಯ ಬದಲಿಗೆ ಹಣ ಕೊಡಲು ಮುಂದಾಗಿದದ್ದೇವೆ ಎಂದು ತಿಳಿಸಿದ್ದಾರೆ.
ಪ್ರತಿ ಬಿಪಿಎಲ್ ಕುಟುಂಬದಲ್ಲಿರುವ ಒಟ್ಟು ಸದಸ್ಯರಿಗೆ ತಲಾ ಐದು ಕೇಜಿ ಲೆಕ್ಕದಲ್ಲಿ ಒಬ್ಬರಿಗೆ ಪ್ರತಿ ತಿಂಗಳು 170 ರೂ. ಕೊಡುವುದಾಗಿ ಹೇಳಿದ್ದಾರೆ. ಕೇಂದ್ರದಿಂದ ಅಕ್ಕಿ ಸಿಗುವ ವರೆಗು ಪ್ರತಿ ಖಾತೆಗೆ ಹಣ ನೀಡಲಾಗುವುದು ಎಂದು ಎಂದು ಸಿಎಂ ಹೇಳಿದ್ದಾರೆ.
ಒಟ್ಟಿನಲ್ಲಿ ಗ್ಯಾರಂಟಿ ಘೋಷಣೆ ಮಾಡಿ ಇಕ್ಕಟ್ಟಿಗೆ ಸಿಲುಕಿರುವ ಕಾಂಗ್ರೆಸ್ ಗೆ ಕೇಂದ್ರದಿಂದ ಅಕ್ಕಿಯೂ ಸಿಗುತ್ತಿಲ್ಲ. ಇಲ್ಲಿ ಮಾತಿಗೆ ತಪ್ಪುವ ಸಂದರ್ಭ ಬರುತ್ತದೆ ಎಂಬ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ಸರ್ಕಾರ ಹಣ ಕೊಡುವ ನಿರ್ಧಾರ ಮಾಡಿದೆ ಎಂದು ಹೇಳಲಾಗುತ್ತಿದೆ.


