
BREAKING : ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ; ರಾಜ್ಯಪಾಲರ ನಿರ್ಧಾರ ಎತ್ತಿ ಹಿಡಿದ ಕೋಟ್೯

ಬೆಂಗಳೂರು : ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪಿ ನೀಡಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ತನಿಖೆಗೆ ಆದೇಶ ನೀಡಿದ್ದ ರಾಜ್ಯಪಾಲರ ನಿರ್ಧಾರವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ವಾದ, ಪ್ರತಿವಾದ ಆಲಿಸಿ ಮಹತ್ವದ ತೀರ್ಪಿ ನೀಡಿದ್ದು, ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ಕೋಟ್೯ ಆದೇಶ ನೀಡಿದೆ.
ಸಧ್ಯ ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಶಿಪ್ಟ್ ಆಗಿದ್ದು, ಅರ್ಜಿದಾರ ಟಿ.ಜೆ ಅಬ್ರಾಹಂ ಅವರು ಸಲ್ಲಿಸಿದ್ದ ಅರ್ಜಿ ಮೇಲೆ ತನಿಖೆಗೆ ಆದೇಶ ನೀಡುವ ಸಾಧ್ಯತೆ ಇದೆ.
ಸುಧೀರ್ಘ ರಾಜಕೀಯ ಅನುಭವ ಹೊಂದಿರುವ ಸಿದ್ದರಾಮಯ್ಯ ಅವರಿಗೆ ಮುಡಾ ಪ್ರಕರಣ ಉರುಳಾಗಿದೆ. ಇದರಿಂದ ಸಿಎಂ ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಮುಡಾ ಪ್ರಕರಣ ಒಂದು ಕಪ್ಪುಚುಕ್ಕೆ ಆಗಿದ್ದು ವಿಪರ್ಯಾಸ.
Muda case CM Siddaramah Mysore Karnataka High Cort