Select Page

Advertisement

ಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ ; ನಮ್ಮ‌ ಹೋರಾಟಕ್ಕೆ ಸಿಕ್ಕ ಜಯ ಎಂದ ವಿಜಯೇಂದ್ರ

ಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ ; ನಮ್ಮ‌ ಹೋರಾಟಕ್ಕೆ ಸಿಕ್ಕ ಜಯ ಎಂದ ವಿಜಯೇಂದ್ರ

ಬೆಂಗಳೂರು : ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಗಿಬಿದ್ದಿದ್ದು ಸತ್ಯ ಮೇವ ಜಯತೆ ಎಂದು ಹೇಳಿಕೊಂಡಿದೆ. ಜೊತೆಗೆ ಬಿಜೆಪಿ ಹೋರಾಟಕ್ಕೆ ಸಿಕ್ಕ ಜಯ ಎಂದು ಹೇಳಿಕೊಂಡಿದೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಮೈಸೂರು ಚಲೋ ಮೂಲಕ ಪ್ರತಿಭಟನೆ ನಡೆಸಿತ್ತು. ಇದರಿಂದ ಸಿಎಂ ಸೇರಿದಂತೆ ಕಾಂಗ್ರೆಸ್ ಪಾಳೆಯ ತೀವ್ರ ಮುಜುಗರ ಅನುಭವಿಸಿತ್ತು. ಸಧ್ಯ ಸಿಎಂ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶ ನೀಡಿದ್ದು, ಬಿಜೆಪಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದೆ.

ಈ ಕುರಿತು ಬಿಜೆಪಿ ರಾಜ್ಯಾಧ್ಯಕ ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್. ಅಶೋಕ್, ಮುಖಂಡರಾದ ಸಿ.ಟಿ ರವಿ ಸೇರಿ ಅನೇಕರು ಪ್ರತಿಕ್ರಿಯೆ ನೀಡಿದ್ದು ಸಿಎಂ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೆ ಸಿಎಂ ರಾಜೀನಾಮೆಗೆ ಆಗ್ರಹಿಸಿ ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.

ತಮ್ಮ ವಿರುದ್ಧ ಮುಡಾ ಪ್ರಕರಣದ ತನಿಖೆಗೆ ಹೈಕೋರ್ಟ್ ಆದೇಶ ನೀಡಿದ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ನಡೆ ತೀವ್ರ ಕುತೂಹಲ ಮೂಡಿಸಿದೆ. ಜೊತೆಗೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲಾ ಸೂಚನೆ ಮೇರೆಗೆ ಬುಧವಾರ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ ಎಂದು ತಿಳಿದುಬಂದಿದೆ.

Advertisement

Leave a reply

Your email address will not be published. Required fields are marked *

error: Content is protected !!