BREAKING : ಸಿಎಂ ಗೆ ಬಿಗ್ ಶಾಕ್ ; ಸಿದ್ದು ವಿರುದ್ಧ FIR ದಾಖಲಿಸಲು ಆದೇಶ
ಬೆಂಗಳೂರು : ಸಿಎಂ ವಿರುದ್ಧ ತನಿಖೆಗೆ ನೀಡಿದ್ದ ಆದೇಶ ಕುರಿತು ನಿನ್ನೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿತ್ತು. ಈಗ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಮಹತ್ವದ ಆದೇಶ ಹೊರಬಿದ್ದಿದ್ದು , ಲೋಕಾಯುಕ್ತ ತನಿಖೆಗೆ ಆದೇಶ ನೀಡಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ನೇಹಮಯಿ ಕೃಷ್ಣಾ ಅವರು ದಾಖಲಾಗಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.
ನ್ಯಾ. ಸಂತೋಷ್ ಗಜಾನನ್ ಭಟ್ ಅವರಿದ್ದ ನ್ಯಾಯಪೀಠ ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರದ ಕುರಿತು ನ್ಯಾಯಾಲಯ ತನಿಖೆ ನಡೆಸಲು ಲೋಕಾಯುಕ್ತಕ್ಕೆ ಒಪ್ಪಿಸಿದೆ. ಜೊತೆಗೆ ಮೂರು ತಿಂಗಳ ಒಳಗಾಗಿ ವರದಿ ನೀಡುವಂತೆ ಆದೇಶ ಹೊರಡಿಸಿದೆ.
ಮೈಸೂರು ಲೋಕಾಯುಕ್ತ ಪೋಲಿಸರು ತನಿಖೆ ನಡೆಸಬೇಕಾಗುತ್ತಿದೆ, ಈ ಕುರಿತು ಲೋಕಾಯುಕ್ತ ಎಸ್ಪಿ ಅವರಿಗೆ ಕೋರ್ಟ್ ಸೂಚನೆ ನೀಡಿದೆ. ದೂರುದಾರರ ಪರ ವಕೀಲೆ ಲಕ್ಷ್ಮೀ ಅಯ್ಯಂಗರ್ ಅವರು ವಾದ ಮಂಡಿಸಿದ್ದರು.


