Breaking : ಮುಡಾದಿಂದ ಪಡೆದಿದ್ದ 14 ಸೈಟ್ ವಾಪಸ್ ನೀಡಿದ ಸಿಎಂ ಪತ್ನಿ ಪಾರ್ವತಿ
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಪಡೆದಿದ್ದ 14 ನಿವೇಶನಗಳನ್ನು ಮುಡಾಗೆ ವಾಪಸ್ ನೀಡಿ ಪತ್ರ ಒಂದನ್ನು ಬರೆದಿದ್ದಾರೆ.
ಮೈಸೂರಿನ ಕೆಸರೆ ಗ್ರಾಮದ ಸರ್ವೇ ನಂ 464 ರಲ್ಲಿ 3 ಎಕರೆ 16 ಗುಂಟೆ ಜಮೀನನ್ನು ಮುಡಾ ಪ್ರಾಧಿಕಾರವು ಭೂಸ್ವಾಧೀನ ಇಲ್ಲದೆ ಬಳಸಿಕೊಂಡಿದ್ದಕ್ಕೆ ಪರಿಹಾರದ ಬದಲಾಗಿ ವಿಜಯನಗರದ 3 ಮತ್ತು 4 ನೇ ಹಂತದಲ್ಲಿ ನನಗೆ ಮಂಜೂರು ಮಾಡಲಾದ 14 ನಿವೇಶನಗಳನ್ನು ಹಿಂದಿರುಗಿಸುವ ಕುರಿತು.
ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಮೈಸೂರು ತಾಲೂಕು ಕಸಬಾ ಹೊಬಳಿ ಕೆಸರೆ ಗ್ರಾಮದ ಸರ್ವೇ ನಂ 464 ರಲ್ಲಿ 3 ಎಕರೆ 16 ಗುಂಟೆ ಜಮೀನನ್ನು ಬಳಸಿಕೊಂಡಿದ್ದಕ್ಕೆ ಪರಿಹಾರದ ಬದಲಾಗಿ ವಿಜಯನಗರದ 3 ಮತ್ತು 4 ನೇ ಹಂತದಲ್ಲಿ ನನಗೆ ಮಂಜೂರು ಮಾಡಲಾದ 14 ನಿವೇಶನಗಳನ್ನು ನೀಡಿದ್ದು ತಮಗೆ ತಿಳಿದಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನನ್ನ ಪರವಾಗಿ ಕಾರ್ಯಗತಗೊಳಿಸಿದ 14 ನಿವೇಶನಗಳ ಕ್ರಯಪತ್ರವನ್ನು ರದ್ದುಗೊಳಿಸುವ ಮೂಲಕ ನಾನು ಪರಿಹಾರ ನಿವೇಶನಗಳನ್ನು ಹಿಂದಿರುಗಿಸಲು ಬಯಸುತ್ತೇನೆ. ನಿವೇಶ ಸ್ವಾಧೀನ ಸಹ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಮರಳಿ ಹಸ್ತಾಂತರಿಸುತ್ತಿದ್ದೇನೆ. ಈ ನಿಟ್ಟಿನಲ್ಲಿ ಆದಷ್ಟು ಭೇಗ ಕ್ರಮ ಕೈಗೊಳ್ಳಿ ತಮ್ಮ ವಿಶ್ವಾಸಿ. ಶ್ರೀಮತಿ ಪಾರ್ವತಿ.
ಇದರ ಜೊತೆ ಸಿಎಂ ಪತ್ನಿ ಭಾವನಾತ್ಮಕ ಪತ್ರವನ್ನು ಬರೆದಿದ್ದಾರೆ.