Select Page

ವಿಶೇಷಚೇತನರ ಪಾಲಿಗೆ ನಮ್ಮದು ಹೃದಯವಂತ ಸರ್ಕಾರ : ಸಚಿವೆ ಲಕ್ಷ್ಮಿ ಹೆಬ್ಬಾಳಕರ್

ವಿಶೇಷಚೇತನರ ಪಾಲಿಗೆ ನಮ್ಮದು ಹೃದಯವಂತ ಸರ್ಕಾರ : ಸಚಿವೆ ಲಕ್ಷ್ಮಿ ಹೆಬ್ಬಾಳಕರ್

ಬೆಂಗಳೂರು : ರಾಜ್ಯದಲ್ಲಿ ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡುತ್ತಿದ್ದು, ರಾಜ್ಯ ಸರ್ಕಾರ ವಿಕಲಚೇತನರ ಪಾಲಿಗಂತೂ ಹೃದಯವಂತ ಸರ್ಕಾರವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಹೇಳಿದ್ದಾರೆ.

ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಮಂಗಳವಾರ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶಾಲಯ ವತಿಯಿಂದ ಅಯೋಜಿಸಿದ್ದ ವಿಕಲಚೇತನ ದಿನಾಚರಣೆ- 2024, ಆರೈಕೆದಾರರಿಗೆ ಮಾಸಿಕ ಭತ್ಯೆ ಯೋಜನೆಗೆ ಚಾಲನೆ ಹಾಗೂ ವಿಶ್ವ ಆರೈಕೆದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು.

ಇಂದು ಸರ್ಕಾರ ಬಹಳಷ್ಟು ಕಾರ್ಯಕ್ರಮಗಳನ್ನು ನಮ್ಮ ಇಲಾಖೆ ವತಿಯಿಂದ ವಿಕಲಚೇತನರಿಗೆ ಕೊಟ್ಟಿದೆ. ನಮ್ಮ ಉದ್ದೇಶ; ಗುರಿ ಇಷ್ಟೇ, ವಿಶೇಷಚೇತನರ ಮೂಲಭೂತ ಹಕ್ಕುಗಳನ್ನು ರಕ್ಷಿಸುವುದು. ದೇಶದಲ್ಲಿ ಎಲ್ಲರಿಗೂ ಸಂವಿಧಾನಬದ್ಧವಾದ ಹಕ್ಕುಗಳಿವೆ. ಎಲ್ಲರಿಗೂ ಸಮಾನವಾದ ಅವಕಾಶಗಳಿವೆ. ಅದರಲ್ಲೂ ವಿಶೇಷವಾಗಿ ವಿಶೇಷಚೇತನರಿಗೂ ಅನ್ವಯಿಸುತ್ತವೆ. ಸರ್ಕಾರ ಎಲ್ಲರಿಗೂ ಸಮಾನವಾದ ಅವಕಾಶಗಳನ್ನು ಕಲ್ಪಿಸಲು ಮುಂದಾಗಿದೆ ಎಂದರು.

ಸಂವಿಧಾನಬದ್ಧವಾದ ಹಕ್ಕನ್ನು ಎಲ್ಲರಿಗೂ ಸಮಾನವಾದ ಅಧಿಕಾರಗಳು, ಸಮಾನವಾದ ಅವಕಾಶಗಳನ್ನು, ಅದರಲ್ಲೂ ವಿಶೇಷವಾಗಿ ವಿಕಲಚೇತನರಿಗೂ ನೀಡುವುದೇ ನಮ್ಮ ಸರ್ಕಾರದ ಉದ್ದೇಶ. ಇಲಾಖೆಯ ಅನೇಕ ಕಾರ್ಯಕ್ರಮಗಳನ್ನು ವಿಕಲಚೇತನರಿಗೆ ನೀಡಲಾಗಿದೆ. ಇಲಾಖೆಯ ಎಲ್ಲ ಕಾರ್ಯಕ್ರಮಗಳನ್ನು ಕೈಪಿಡಿಯನ್ನು ಬಿಡುಗಡೆಗೊಳಿಲಾಗಿದೆ.

ಮುಖ್ಯಮಂತ್ರಿಗಳು ಹಾಗೂ ನಮ್ಮ ಸರ್ಕಾರಕ್ಕೆ ಒಳ್ಳೆಯ ಹೃದಯವಿದೆ; ವಿಕಲಚೇತನರ ಬಗ್ಗೆ ಅತ್ಯಂತ ಗೌರವವಿದೆ. ವಿಕಲಚೇತರಿಗೆ ಏನೆಲ್ಲ ಅನುಕೂಲಗಳನ್ನು ಮಾಡಬೇಕೆನ್ನುವುದನ್ನು ಮನಗಂಡಿದೆ ಎಂದು ಹೇಳಿದರು.

ವಿಕಲಚೇತನರ ಬಗ್ಗೆ ವಿಶೇಷ ಕಾಳಜಿ, ಆಸಕ್ತಿ ಸರ್ಕಾರಕ್ಕಿದೆ; ಹಾಗೆಯೇ, ವಿಕಲಚೇತನರನ್ನು ನೋಡಿಕೊಳ್ಳುವ ತಾಯಿಂದಿರರು, ಪೋಷಕರಾದ ಆರೈಕೆದಾರರಿಗೆ ಸರ್ಕಾರ ತಿಂಗಳಿಗೆ ಒಂದು ಸಾವಿರ ರೂಪಾಯಿ ಮಾಸಾಶನ ನೀಡುತ್ತಿದೆ. ಇದು ದೇಶದ ಇತಿಹಾಸದಲ್ಲೇ ಪ್ರಥಮ ಬಾರಿಗೆ ನಮ್ಮ ಸರ್ಕಾರ ಆರೈಕೆದಾರರಿಗೆ ಮಾಸಾಶನ ನೀಡುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ವಿಕಲಚೇತನರು ಸಮಾಜಕ್ಕೆ ಆದರ್ಶಪ್ರಾಯರು; ಏಕೆಂದರೆ ಆ ಭಗವಂತ ಬಹಳಷ್ಟು ಒಳ್ಳೆಯ ಆರೋಗ್ಯವನ್ನು, ಒಳ್ಳೆಯ ಜೀವನವನ್ನು ನೀಡಿದ್ದರೂ ಕೆಲವೊಂದು ಸಂದಿಗ್ಧ ಸಂದರ್ಭದಲ್ಲಿ ತಲೆಯ ಮೇಲೆ ಕೈ ಇಟ್ಟುಕೊಳ್ಳುತ್ತಾರೆ. ನಮಗೆಲ್ಲ, ನಮ್ಮಂತಹ ಎಲ್ಲರಿಗೂ ವಿಕಲಚೇತನರು ಆದರ್ಶರಾಗಿದ್ದಾರೆ, ಸಮಾಜದ ಪ್ರತಿಯೊಂದು ಕ್ಷೇತ್ರದಲ್ಲೂ; ಎಲ್ಲರನ್ನೂ ಮೀರಿ ಸಾಧನೆ ಮಾಡಿದ್ಧಾರೆ. ಎಲ್ಲರಿಗೂ ಪ್ರೇರಣೆಯಾಗಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬಾಲಭವನ ಅಧ್ಯಕ್ಷ ಬಿ.ಆರ್.ನಾಯ್ಡು, ಧಾರವಾಡದ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕ ಟಿ. ರಾಘವೇಂದ್ರ,

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕ ಸಿದ್ದೇಶ್ವರ್, ವಿಶೇಷ ಆಹ್ವಾನಿತರಾದ ಇಂದುಮತಿ ರಾವ್, ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ, ಸಚಿವರ ಆಪ್ತ ಕಾರ್ಯದರ್ಶಿ ಡಾ.ಟಿ.ಎಚ್.ವಿಶ್ವನಾಥ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Advertisement

Leave a reply

Your email address will not be published. Required fields are marked *

error: Content is protected !!