ಬೆಳಗಾವಿ : ಎಡಗಾಲಿನ ಮಂಡಿಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾದರು.

ತಪಾಸಣೆ ನಡೆಸಿದ ವೈದ್ಯರು ಈ ಹಿಂದೆ ಲೆಗಮೆಂಟ್ ಶಸ್ತ್ರ ಚಿಕಿತ್ಸೆ ನಡೆದ ಜಾಗದ ಮೇಲೆ ಒತ್ತಡ ಬಿದ್ದಿರುವುದರಿಂದ ನೋವು ಕಾಣಿಸಿಕೊಂಡಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ.

ಎರಡು ದಿನ ಪ್ರಯಾಣ ಮಾಡದೆ ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.

ವೈದ್ಯರು ಹೇಳಿದ್ದು : ಆಸ್ಪತ್ರೆಯ ವೈದ್ಯರಾದ ಡಾ.ಸತ್ಯನಾರಾಯಣ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಆರೋಗ್ಯ ತಪಾಸಣೆ ನಡೆದಿದೆ. ಸಿಎಂ ಅವರಿಗೆ ಮಂಡಿನೋವು ಹಿನ್ನೆಲೆ ನೀ ಪ್ಯಾಡ್ ಹಾಕಲಾಗಿದೆ. ಸದ್ಯ ಅವರು ಎರಡು ದಿನಗಳ ಕಾಲ ವಿಶ್ರಾಂತಿ ಪಡೆಯಲೇಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಸಿದ್ದರಾಮಯ್ಯ ಅವರು ಕಾವೇರಿ ನಿವಾಸಕ್ಕೆ ತೆರಳಿದ್ದಾರೆ.