
ಇಬ್ಬರು ನಾಯಕರಿಗೆ ಶುಭ ಶುಕ್ರವಾರ ; ಕೋರ್ಟ್ ಮಹತ್ವದ ಆದೇಶ

ಧಾರವಾಡ : ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣ ರದ್ದುಪಡಿಸುವಂತೆ ಆಗ್ರಹಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ ಮಹತ್ವದ ಆದೇಶ ನೀಡಿದ್ದು, ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ನೀಡಿ ಆದೇಶ ಹೊರಡಿಸಿದೆ.
ಈ ಆದೇಶದಿಂದ ಯಡಿಯೂರಪ್ಪ ಅವರು ಬಂಧನದ ಭೀತಿಯಿಂದ ಹೊರಬಂದಿದ್ದು, ಪೋಕ್ಸೋ ಪ್ರಕರಣ ರದ್ದುಪಡಿಸಲು ಕೋರ್ಟ್ ನಿರಾಕರಿಸಿದೆ.
ಇನ್ನೂ ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣವನ್ನು ಸಿಬಿಐ ಗೆ ವರ್ಗಾವಣೆ ಮಾಡಬೇಕು ಎಂಬ ಅರ್ಜಿ ವಜಾ ಮಾಡಿರುವ ಹೈಕೋರ್ಟ್ ಪ್ರಕರಣವನ್ನು ಲೋಕಾಯುಕ್ತದಿಂದ ತನಿಖೆ ನಡೆಸುವಂತೆ ಆದೇಶ ನೀಡಿದೆ.
ಒಟ್ಟಿನಲ್ಲಿ ಇವತ್ತು ಮಾಜಿ ಹಾಗೂ ಹಾಲಿ ಸಿಎಂ ಗಳಿಗೆ ಕೋರ್ಟ್ ಬಿಗ್ ರಿಲೀಫ್ ಸಿಕ್ಕಿದ್ದು ಇಬ್ಬರಿಗೂ ಶುಭ ಶುಕ್ರವಾರ ಆಗಿದೆ.