
ಸಿದ್ದರಾಮಯ್ಯ ಬಜೆಟ್ : ಅಥಣಿಗೆ ಬಂಪರ್ ಕೊಡುಗೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರ ದಾಖಲೆ ಬಜೆಟ್ ಮಂಡನೆ ನಡೆಯುತ್ತಿದ್ದು ಈ ಬಾರಿ ಅಥಣಿಗೆ ಬಂಪರ್ ಕೊಡುಗೆ ನೀಡಿದ್ದಾರೆ.
ಜಿಲ್ಲೆಯ ಅಥಣಿ ತಾಲೂಕಿಗೆ 50 ಹಾಸಿಗೆ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಅನುಮೋದನೆ ನೀಡಲಾಗಿದೆ . ಅಥಣಿ ಭಾಗದ ಜನರ ಬಹು ದಿನಗಳ ಬೇಡಿಕೆಗೆ ಕೊನೆಗೂ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನಲ್ಲಿ ಹೊಸ ಕೃಷಿ ಕಾಲೇಜನ್ನು ಸ್ಥಾಪಿಸಲು ತಜ್ಞರಿಂದ ಕಾರ್ಯಸಾಧ್ಯತಾ ವರದಿಯನ್ನು ಪಡೆದುಕೊಳ್ಳಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.