ಭದ್ರತೆಗೆ ಧಾರವಾಡದಿಂದ ಬಂದ ಪೊಲೀಸ್ ಅಧಿಕಾರಿ ಮೇಲೆ ಕೈ ಎತ್ತಿದ ಸಿಎಂ ; ಬಿಜೆಪಿ ಆಕ್ರೋಶ
ಬೆಳಗಾವಿ : ಸಿಎಂ ಸಿದ್ದರಾಮಯ್ಯ ಅವರ ಭದ್ರತೆ ದೃಷ್ಟಿಯಿಂದ ಧಾರವಾಡ ವಿಭಾಗದ ಹೆಚ್ಚುವರಿ ಎಸ್ಪಿ ನಾರಾಯಣ ಭರಮನಿ ಅವರ ಮೇಲೆ ಕೈ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಜನಸಾಮಾನ್ಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಹೌದು ಕಾಂಗ್ರೆಸ್ ಸಮಾವೇಶದ ವೇಳೆ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ವೇದಿಕೆ ಮೇಲೆ ಭಾಷಣ ಮಾಡುತ್ತಿದ್ದ ಸಿಎಂ ಕೋಪದಿಂದ ಎಎಸ್ಪಿ ಅವರನ್ನು ವೇದಿಕೆ ಮೇಲೆ ಕರೆದರು.
ವೇದಿಕೆಗೆ ಧಾರವಾಡ ಹೆಚ್ಚುವರಿ ಎಸ್ಪಿ ನಾರಾಯಣ ಭರಮನಿ ಅವರು ಬರುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಕೋಪದಿಂದ ಕೈಮಾಡಿ ಆಕ್ರೋಶ ಹೊರಹಾಕಿದರು. ಸಿಎಂ ಸಿದ್ದರಾಮಯ್ಯ ಅವರ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗುತ್ತಿದೆ.


