ಕಾಲ್ತುಳಿತ ದುರ್ಘಟನೆ ; RCB ಮುಖ್ಯಸ್ಥರ ಬಂಧನಕ್ಕೆ ಸೂಚನೆ, ಕಮಿಷನರ್ ಅಮಾನತು
ಬೆಂಗಳೂರು : RCB ಸಂಭ್ರಮಾಚರಣೆ ವೇಳೆ ಸಂಭವಿಸಿದ್ದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಸರಕಾರ ಮಹತ್ವದ ನಿರ್ಣಯ ಕೈಗೊಂಡಿದ್ದು, RCB, KSCA ಹಾಗೂ ಇವೆಂಟ್ ಮ್ಯಾನೆಜ್‌ಮೆಂಟ್ ವಿರುದ್ಧ ಪ್ರಕರಣ ದಾಖಲಿಸಿ ಪ್ರತಿನಿಧಿಗಳ ಬಂಧನಕ್ಕೆ ಆದೇಶ ಹೊರಡಿಸಲಾಗಿದೆ.
ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದುರ್ಘಟನೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಕಾಲ್ತುಳಿತ ದುರ್ಘಟನೆ ನೋವು ತರೆಸಿದೆ. ದುರ್ಘಟನೆಗೆ ಕಾರಣರಾದ RCB, KSCA ಹಾಗೂ ಇವೆಂಟ್ ಮ್ಯಾನೆಜ್‌ಮೆಂಟ್ ವಿರುದ್ಧ ಪ್ರಕರಣ ದಾಖಲಿಸಿ ಪ್ರತಿನಿಧಿಗಳ ಬಂಧನಕ್ಕೆ ಆದೇಶ ಹೊರಡಿಸಲಾಗಿದೆ.
ಘಟನೆಯಲ್ಲಿ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ನಗರ ಪೊಲೀಸ್ ಆಯುಕ್ತ ದಯಾನಂದ, ಕಬ್ಬನ್ ಪಾರ್ಕ್ ಪಿಐ, ಎಸಿಪಿ ಅಡಿಷನಲ್ ಕಮಿಷನರ್ ವಿಕಾಸ್ ಕುಮಾರ್, ಬೆಂಗಳೂರು ಸೆಂಟ್ರಲ್ ಡಿಸಿಪಿ ತಂಡದಂದ ಮಾಡಲಾಗಿದೆ.
ಕಾಲ್ತುಳಿತ ಘಟನೆ ಕುರಿತು ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ನೇತೃತ್ವದ ಏಕಸದಸ್ಯ ಆಯೋಗದಿಂದ ತನಿಖೆಗೆ ಆದೇಶಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದರು.


