ದೆಹಲಿಗೆ ಬರುವಂತೆ ಸಿಎಂ ಗೆ ಹೈಕಮಾಂಡ್ ಬುಲಾವ್, ಮಹತ್ವದ ನಿರ್ಧಾರ ಸಾಧ್ಯತೆ
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರಿಗೆ ದೆಹಲಿಗೆ ಬರುವಂತೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್ ನೀಡದೆ.
ಈಗಾಗಲೇ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು ನಾಳೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೊರಡಲಿದ್ದಾರೆ. ಕಾಲ್ತುಳಿತ ಪ್ರಕರಣ ಕುರಿತು ವರದಿ ಸಲ್ಲಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಕಾಲ್ತುಳಿತ ಪ್ರಕರಣದಲ್ಲಿ ಕಾಂಗ್ರೆಸ್ ಸರಕಾರಕ್ಕೆ ಸಾಕಷ್ಟು ಮುಜುಗರ ತರಿಸಿದ್ದು ಮಾತ್ರವಲ್ಲದೆ ರಾಷ್ಟ್ರಮಟ್ಟದಲ್ಲಿಯೂ ತೀವ್ರ ಚರ್ಚೆ ಹುಟ್ಟುಹಾಕಿದೆ. ಈ ಮಧ್ಯೆ ಹೈಕಮಾಂಡ್ ರಾಜ್ಯದ ಇಬ್ಬರೂ ನಾಯಕರನ್ನು ಕರಿಸಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ.


