Select Page

Advertisement

ಬೆಳಗಾವಿ ಜಿಲ್ಲಾ ವಿಭಜನೆ ; ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿ

ಬೆಳಗಾವಿ ಜಿಲ್ಲಾ ವಿಭಜನೆ ; ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿ



ಗೌರಿಬಿದನೂರು : ಬೆಳಗಾವಿ ಜಿಲ್ಲಾ ವಿಭಜನೆ ಕುರಿತು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಇಂದು ಮಹತ್ವದ ಮಾಹಿತಿ ಹೊರಹಾಕಿದ್ದಾರೆ.

ಗೌರಿಬಿದನೂರಿನಲಗಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಬೆಳಗಾವಿಯಲ್ಲಿ ಮಾತ್ರ ಹೊಸ ಜಿಲ್ಲೆ ರಚಿಸುವ ಬಗ್ಗೆ ಬೇಡಿಕೆ ಇದ್ದು, ಇದಕ್ಕೆ ಸಂಬಂಧಿಸಿದಂತೆ ಶಾಸಕರು, ಸಚಿವರು ಮಾತು ಸಂಸದರ ಸಭೆಯನ್ನು ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

ಈಗಾಗಲೇ ಬೆಳಗಾವಿ ಜಿಲ್ಲಾ ವಿಭಜನೆ ಕುರಿತು ಸತೀಶ್ ಜಾರಕಿಹೊಳಿ ಮಾಹಿತಿ ನೀಡಿದ್ದು, ವಿಭಜನೆ ಕುರಿತು ಮಹತ್ವದ ಆದೇಶ ಬಾಕಿ ‌ಇದೆ ಎಂದಿದ್ದಾರೆ. ಇನ್ನೂ ಬೆಳಗಾವಿ, ಚಿಕ್ಕೋಡಿ ಹಾಗೂ ಗೋಕಾಕ್ ಹೊಸ ಜಿಲ್ಲೆ ಫೈನಲ್ ಆಗಲಿದೆ ಎಂಬ ಮಾತು ಜೋರಾಗಿ ಕೇಳಿಬರುತ್ತಿವೆ.

ಸಿಎಂ ಸಿದ್ದರಾಮಯ್ಯ ಅವರ ಇದೇ ಅವಧಿಯಲ್ಲಿ ಬೆಳಗಾವಿ ಜಿಲ್ಲಾ ವಿಭಜನೆ ಸಾಧ್ಯತೆ ದಟ್ಟವಾಗಿದೆ. ಒಂದು ವೇಳೆ ಅಖಂಡ ಬೆಳಗಾವಿ ವಿಭಜನೆಯಾದರೆ ಬೆಳಗಾವಿ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಆಗುವುದರಲ್ಲಿ ಅನುಮಾನವಿಲ್ಲ.

ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ : ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯಲಿರುವುದು ಈ ಭಾಗದ ಜನರಲ್ಲಿ ನಿರೀಕ್ಷೆ ಹುಟ್ಟುಹಾಕಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಬೆಂಗಳೂರು ವಿಭಾಗಕ್ಕೆ ಸಂಬಂಧಿಸಿದಂತೆ 19 ರಂದು ಸಚಿವ ಸಂಪುಟ ನಡೆಯುತ್ತಿದೆ. ಅಲ್ಲಿ ಪ್ರಸ್ತಾಪವಾಗುವ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದರು.

ಮಾವಿಗೆ ಬೆಂಬಲ ಬೆಲೆ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ :
ಮಾವಿನ ಬೆಲೆ ಕುಸಿತದ ಬೆಂಬಲ ಬೆಲೆ ನೀಡುವ ಬಗ್ಗೆ ಮಾತನಾಡಿ ಆಂಧ್ರದಲ್ಲಿ ತೋತಾಪುರಿ ಮಾವಿಗೆ ಒಂದು ಕೆಜಿ ಗೆ 4 ರೂ. ನೀಡಲಾಗುತ್ತಿದ್ದು, ಇಲ್ಲಿಯೂ ಕೊಡಬೇಕು ಎನ್ನುವ ಬೇಡಿಕೆಯನ್ನು ಸಚಿವ ಎಂ.ಸಿ.ಸುಧಾಕರ್ ಅವರು ಮಾಡಿದ್ದು, ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗುವುದು ಎಂದರು.

ಜೂನ್ 4 ರಂದು ಕರ್ನಾಟಕ ಕ್ರಿಕೆಟ್ ಸಂಸ್ಥೆ ಹಾಗೂ ಆರ್.ಸಿ. ಬಿ ಯ ವತಿಯಿಂದ ಆರ್.ಸಿ. ಬಿ ಆಟಗಾರರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ನನಗೆ ಅಂದು ಬೆಳಿಗ್ಗೆ 11.29 ನಿಮಿಷಕ್ಕೆ ಕೆ.ಎಸ್.ಸಿ.ಎ ವತಿಯಿಂದ ಶಂಕರ್ ಮತ್ತು ಜಯರಾಮ್ ಅವರು ಆಹ್ವಾನ ನೀಡಿ ಮನವಿ ಮಾಡಿಕೊಂಡರು.

ಇದಕ್ಕೆ ನಾನು ಒಪ್ಪಿಗೆ ನೀಡಿದೆ. ಬಳಿಕ ಅವರು ರಾಜ್ಯಪಾಲರನ್ನು ಆಹ್ವಾನ ಮಾಡಿರುವುದಾಗಿ ತಿಳಿಸಿದರು. ಪತ್ರಿಕೆಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ರಾಜ್ಯಪಾಲರು ಅವರಾಗಿಯೇ ಬಂದಿದ್ದರು ಎಂದು ಪ್ರಾಚಾರವಾಗಿದ್ದು ಅದು ತಪ್ಪು ಎಂದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿದ್ದ ಗೋವಿಂದರಾಜು ಅವರು ರಾಜ್ಯಪಾಲರಿಗೆ ಕರೆ ಮಾಡಿ ಫೋನ್ ನನಗೆ ಕೊಟ್ಟರು. ಆಗ ನಾನು ಕೂಡ ಕಾರ್ಯಕ್ರಮಕ್ಕೆ ತೆರಳುತ್ತಿದ್ದು ನೀವು ಬನ್ನಿ ಎಂದು ಆಹ್ವಾನಿಸಿದೆ ಎಂದರು.

Advertisement

Leave a reply

Your email address will not be published. Required fields are marked *

error: Content is protected !!