ಸಿಎಂ ಸಿದ್ದರಾಮಯ್ಯ ವಿರುದ್ಧ ಬೆಳಗಾವಿಯಲ್ಲಿ ಪ್ರಕರಣ ದಾಖಲು….ಏನು ಕಾರಣ..?
ಬೆಳಗಾವಿ : ಕಳೆದ ಏಪ್ರಿಲ್ 28 ರಂದು ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಸಮಾವೇಶದ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿ ವಿರುದ್ಧ ಹರಿಹಾಯ್ದು ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ದೂರು ದಾಖಲಿಸಿದ್ದಾರೆ.
ಕಾಂಗ್ರೆಸ್ ಸಮಾವೇಶ ಸಂದರ್ಭದಲ್ಲಿ ವೇದಿಕೆ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಭರಮನಿ ಅವರ ಮೇಲೆ ಕೋಪ ಹೊರಹಾಕಿದ್ದರು, ಈ ಸಂದರ್ಭದಲ್ಲಿ ಕೈ ಎತ್ತಿದ್ದು ಇದರಿಂದ ಕರ್ತವ್ಯನಿರತ ಅಧಿಕಾರಿಗೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿ ಬೆಳಗಾವಿ ನಗರದ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣ ದಾಖಲಿಸಿ ಮಾತನಾಡಿದ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ, ಭಾರತೀಯ ನ್ಯಾಯ ಸಂಹಿತೆ-2023ರ ಕಲಂ 132ರ ಪ್ರಕಾರ ಸಾರ್ವಜನಿಕ ಸೇವಕನಾಗಿ ತನ್ನ ಕರ್ತವ್ಯವನ್ನು ನಿರ್ವಹಿಸುವಾಗ ಅಥವಾ ಆ ವ್ಯಕ್ತಿಯು ಸಾರ್ವಜನಿಕ ಸೇವಕನಾಗಿ ತನ್ನ ಕರ್ತವ್ಯವನ್ನು ನಿರ್ವಹಿಸುವ ವೇಳೆ ತಡೆಯುವಂತಿಲ್ಲ. ಸಾರ್ವಜನಿಕ ಸೇವಕನಾಗಿ ತನ್ನ ಕರ್ತವ್ಯವನು ಕಾನೂನು ಬದ್ದವಾಗಿ ನಿರ್ವಹಿಸುವಾಗ ಅಂಥಹ ವ್ಯಕ್ತಿಯ ವಿರುದ್ಧ ಸಾರ್ವಜನಿಕವಾಗಿ ನಿಂದನೆ ಮಾಡುವುದು ಸರಿಯಲ್ಲ. ಈ ಕುರಿತು ಕ್ರಮ ಜರುಗಿಸಬೇಕು ಅಷ್ಟೇ ಅಲ್ಲದೆ ಮಾನವ ಹಕ್ಕುಗಳ ಆಯೋಗಕ್ಕೂ ದೂರು ದಾಖಲಿಸುವುದಾಗಿ ತಿಳಿಸಿದರು.


