ಜಿಪಂ – ತಾಪಂ ಚುನಾವಣೆ ; ಮಹತ್ವದ ಅಪ್ಡೇಟ್ ನೀಡಿದ ಸಿಎಂ ಸಿದ್ದರಾಮಯ್ಯ…!

ಅಂಕೋಲಾ : ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿ ಚುನಾವಣೆ ಕುರಿತು ಸಿಎಂ ಸಿದ್ದರಾಮಯ್ಯ ಅವರು ಮಹತ್ವದ ಅಪ್ಡೇಟ್ ಒಂದನ್ನು ನೀಡಿದ್ದಾರೆ.
ಬರುವ ಜೂನ್ ತಿಂಗಳ ಒಳಗಾಗಿ ಜಿಲ್ಲಾ ಹಾಗೂ ತಾಲೂಕು ಪಂಚಾಯತಿ ಚುನಾವಣೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಅಂಕೋಲಾ ತಾಲೂಕಿನ ಮಂಜಗುಣಿಯಲ್ಲಿ ಭಾನುವಾರ ಗಂಗಾವಳಿ – ಮಂಜಗುಣಿ ಸೇತುವೆ ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಹಾಗೂ ತಾಲೂಕು ಪಂಚಾಯತಿ ಚುನಾವಣೆ ಸಮೀಪಿಸಿದ್ದು ಜನಗಣತಿಯು ನಡೆಯಲಿದೆ ಎಂದು ಮಾಹಿತಿ ನೀಡಿದರು. ಈ ವೇಳೆ ಡಿಸಿಎಂ ಡಿ.ಕೆ ಶಿವಕುಮಾರ್ ಉಪಸ್ಥಿತರಿದ್ದರು.


