
Breaking – ಹೈಕೋರ್ಟ್ ಮಹತ್ವದ ಆದೇಶ ; CBI ತನಿಖೆಯಿಂದ ಸಿದ್ದರಾಮಯ್ಯ ಪಾರು

ಧಾರವಾಡ : ತೀವ್ರ ಕುತೂಹಲ ಮೂಡಿಸಿದ್ದ ಮುಡಾ ಪ್ರಕರಣ ಕುರಿತಂತೆ ಧಾರವಾಡ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಶುಕ್ರವಾರ ಆದೇಶ ಪ್ರಕಟಿಸಿದ್ದು, ಮುಡಾ ಪ್ರಕರಣವನ್ನು ಲೋಕಾಯುಕ್ತ ಪೊಲೀಸರಿಂದ ತನಿಖೆ ನಡೆಸಲಿ ಎಂದು ಹೇಳಿದೆ.
ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಮನವಿಯನ್ನು ತಳ್ಳಿ ಹಾಕಿರುವ ಹೈ ಕೋರ್ಟ್ ಕೊನೆಗೂ ಪ್ರಕರಣವನ್ನು ಲೋಕಾಯುಕ್ತರಿಗೆ ನೀಡಿದೆ.