ಸಿ.ಟಿ ರವಿ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಕಾರ್ಯಕರ್ತರು ; ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ
ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದ ಆರೋಪದ ಮೇಲೆ ಸಿ.ಟಿ ರವಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ನಗರದ ಚನ್ನಮ್ಮ ವೃತ್ತದಲ್ಲಿ ಸೇರಿದ್ದ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಸಿ.ಟಿ ರವಿ ಅಣಕು ಶವ ಯಾತ್ರೆ ನಡೆಸಿ ಆಕ್ರೋಶ ಹೊರಹಾಕಿದರು. ಹೆಣ್ಣುಮಕ್ಕಳಿಗೆ ಗೌರವ ಕೊಡುತ್ತೇವೆ ಎಂದು ಹೇಳುವ ಬಿಜೆಪಿಯವರು ಒಬ್ಬ ಸಚಿವೆಗೆ ಈ ರೀತಿ ಅಶ್ಲೀಲ ಪದಬಳಕೆ ಮಾಡಿದ್ದು ಅವರ ಸಂಸ್ಕೃತಿ ತೋರಿಸುತ್ತದೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.
ಸಿ.ಟಿ ರವಿ ಅವರನ್ನು ಕೂಡಲೇ ಪರಿಷತ್ ಸ್ಥಾನದಿಂದ ಅಮಾನತು ಮಾಡಬೇಕು, ಹಾಗೆಯೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಹೆಬ್ಬಾಳಕರ್ ಬೆಂಬಲಿಗರು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.


