ಮುಗ್ಧ ಮುಸಲ್ಮಾನರನ್ನು ಕಾಂಗ್ರೆಸ್ ಬಳಸಿಕೊಳ್ಳುತ್ತಿದೆ : ಅಸಾದುದ್ದೀನ್ ಓವೈಸಿ
ಬೆಳಗಾವಿ : ಕಾಂಗ್ರೆಸ್ ಪಕ್ಷ ಮುಗ್ಧ ಮುಸಲ್ಮಾನರನ್ನು ಬಳಸಿಕೊಂಡು ರಾಜಕಾರಣ ಮಾಡುತ್ತಿದೆ. ಮುಸ್ಲಿಂ ಯುವಕರು ರಾಜಕೀಯದಲ್ಲಿ ಬೆಳೆಯಲು ಇವರು ಬಿಡುತ್ತಿಲ್ಲ ಎಂದು ಎಐಎಂಐಎಂ ಪಕ್ಷದ ಮುಖಂಡ ಅಸಾದುದ್ದೀನ್ ಓವೈಸಿ ಅಭಿಪ್ರಾಯಪಟ್ಟರು.
ಸೋಮವಾರ ನಗರದ ಖಾಸಗಿ ಹೊಟೇಲ್ ನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಇವರು. ಮುಸ್ಲಿಂ ಸಮುದಾಯದ ಯುವಕರು ನಾಯಕತ್ವ ಗುಣ ಅಳವಡಿಸಿಕೊಂಡು ರಾಜಕೀಯವಾಗಿ ಬೆಳೆಯಬೇಕು. ಕೆಲವು ಪಕ್ಷಗಳು ತಮ್ಮ ಸ್ವಾರ್ಥಕ್ಕಾಗಿ ನಮ್ಮನ್ನು ಬಳಸಿಕೊಂಡು ಗುಲಾಮರನ್ನಾಗಿಸಿವೆ, ಇದರಿಂದ ಹಿಂದುಳಿದ ಸಮುದಾಯದ ಜನ ಎಚ್ಚೆತ್ತುಕೊಳ್ಳಬೇಕು ಎಂದರು.
ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಹಿನ್ನಲೆಯಲ್ಲಿ ಈ ಬಾರಿ ಎಐಎಂಐಎಂ ಪಕ್ಷದಿಂದ ಆರು ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದು ಅವರ ಗೆಲುವು ನಿಶ್ಚಿತ. ಕಳೆದ ಬಾರಿ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸಿದ್ದೇವು ಆದರೆ ನಂತರದ ದಿನಗಳಲ್ಲಿ ಕಾಂಗ್ರೆಸ್ ಜೊತೆ ಅವರು ಹೊಂದಾಣಿಕೆ ಮಾಡಿಕೊಂಡು ನಮಗೆ ದ್ರೋಹ ಮಾಡಿದ್ದಾರೆ ಎಂದು ಓವೈಸಿ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ತಾಲಿಬಾನ್ ಅಟ್ಟಹಾಸದ ಕುರಿತು ಕೇಳಿದ ಪ್ರಶ್ನೆಗೆ ಉತ್ತಿರಿಸಿದ ಅವರು. ಅಫ್ಘಾನಿಸ್ತಾನದಲ್ಲಿ ನಮ್ಮದು ಯಾವುದೇ ರೀತಿಯ ಸಂಬಂಧಗಳು ಇಲ್ಲ. ಈ ಕುರಿತು ನರೇಂದ್ರ ಮೋದಿ ಬಾಯ್ಬಿಟ್ಟು ಮಾತನಾಡಬೇಕು ಎಂದರು. ಜೊತೆಗೆ ತೈಲಬೆಲೆ ಏರಿಕೆ ಕುರಿತಾಗಿ ಕೇಂದ್ರ ಸ್ಪಷ್ಟನೆ ನೀಡಬೇಕೆಂದು ಅಭಿಪ್ರಾಯಪಟ್ಟರು.