ಕಾಂಗ್ರೆಸ್ ಸರ್ಕಾರ ಉರುಳಿಸಲು ನಡೆದಿದೆಯಾ ರಣತಂತ್ರ ; ಡಿಕೆಶಿ ಹೊರ ಹಾಕಿದ ಅನುಮಾನ ಏನು..?
ಬೆಂಗಳೂರು : ಸಂಪೂರ್ಣ ಬಹುಮತದಿಂದ ಆಯ್ಕೆಯಾದ ರಾಜ್ಯ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕರವನ್ನು ಅಸ್ಥಿರಗೊಳಿಸಲು ರಣತಂತ್ರ ಹೆಣೆಯುತ್ತಿದ್ದಾರಾ ಎಂಬ ಅನುಮಾನ ಮೂಡಿದ್ದು ಇದಕ್ಕೆ ಪುಷ್ಟಿ ಎಂಬಂತೆ ಡಿಸಿಎಂ ಡಿಕೆ ಶಿವಕುಮಾರ್ ಕೂಡಾ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಹೌದು ಈ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ. ನಮ್ಮ ಸರ್ಕಾರದ ವಿರುದ್ಧ ಕೆಲವರು ಪಿತೂರಿ ನಡೆಸುತ್ತಿರುವುದು ನಮ್ಮ ಗಮನಕ್ಕಿದೆ. ಕೆಲವರು ಸಿಂಗಪುರಕ್ಕೆ ಹೋಗಿ ತಂತ್ರ ಹೆಣೆಯುತ್ತಿದ್ದಾರೆ ಎಂದು ಹೇಳುವ ಮೂಲಕ ಮತ್ತೊಮ್ಮೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಕೇವಲ ಎರಡು ತಿಂಗಳಲ್ಲೇ ಈ ರಿತು ಸರ್ಕಾರ ಬದಲಾವಣೆ ಮಾತು ಯಾಕೆ ಬಂತು ಎಂಬ ಪ್ರಶ್ನೆ ಸಾಮಾನ್ಯವಾಗಿ ಮೂಡಿದೆ. ಆದರೆ ಡಿಕೆ ಶಿವಕುಮಾರ್ ಹೇಳಿಕೆಗೆ ಬಿಜೆಪಿ ವ್ಯಂಗ್ಯವಾಡಿದೆ.