ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ನಿಧನ
ಮಂಗಳೂರು : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ರಾಜ್ಯಸಭಾ ಸದಸ್ಯರಾಗಿದ್ದ ಆಸ್ಕರ್ ಫರ್ನಾಂಡಿಸ್ ನಿಧನರಾಗಿದ್ದಾರೆ.
ಯೋಗ ಮಾಡುತ್ತಿದ್ದ ಸಂದರ್ಭದಲ್ಲಿ ಜಾರಿ ಬಿದ್ದಿದ್ದ ಇವರಿಗೆ ತಲೆ ಭಾಗಕ್ಕೆ ಪೆಟ್ಟಾಗಿತ್ತು. ಕಳೆದ ಕೆಲವು ದಿನಗಳಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆಸ್ಕರ್ ಫರ್ನಾಂಡಿಸ್ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಆಸ್ಕರ್ ಫರ್ನಾಂಡಿಸ್ ಅವರು ಆಸ್ಪತ್ರೆಗೆ ದಾಖಲಾದ ಮಾಹಿತಿ ಪಡೆದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರು ಕುಟುಂಬಿಕರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಚಿವ ಎಂ.ಬಿ.ಪಾಟೀಲ್ ಮುಂತಾದವರು ಮಂಗಳೂರಿನ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.