ಬೆಳಗಾವಿ ಗರ್ಭಿಣಿಯಲ್ಲಿ ಕೊರೊನಾ ಸೋಂಕು ಪತ್ತೆ ; ತುರ್ತು ಸುದ್ದಿಗೋಷ್ಠಿ ಕರೆದ DHO
ಬೆಳಗಾವಿ : ಇಡೀ ಜಗತ್ತಿಗೆ ಕಂಠಕವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ಮತ್ತೊಮ್ಮೆ ತನ್ನ ಆರ್ಭಟ ಮುಂದುವರಿಸಿದ್ದು ಸಧ್ಯ ಬೆಳಗಾವಿಯ ಗರ್ಭಿಣಿ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದೆ.
ಸಧ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳಿಗೆ ಕೊರೊನಾ ಸೋಂಕು ತಗುಲಿದ್ದು ದೃಢವಾಗಿದೆ. ಸಧ್ಯ ಈ ಕುರಿತು ಜಿಲ್ಲಾ ವೈದ್ಯಾಧಿಕಾರಿ ಮಾಹಿತಿ ನೀಡಿದ್ದು, ಬೆಳಗಾವಿ ಜಿಲ್ಲೆಗೆ ಮಹಾಮಾರಿ ಕೊರೊನಾ ಅಂಟಿದ್ದು ಸ್ಪಷ್ಟವಾಗಿದೆ.
ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಐ.ಪಿ ಗಡಾದ್ ತುರ್ತು ಪತ್ರಿಕಾಗೋಷ್ಠಿ ಕರೆದಿದ್ದು ಮಾಹಿತಿ ನೀಡಲಿದ್ದಾರೆ.


