Select Page

Advertisement

ರಾಜ್ಯದಲ್ಲಿ ಕೋವಿಡ್ ಸೋಂಕಿಗೆ ಮೊದಲ ಬಲಿ…! ಸಚಿವರು ಹೇಳಿದ್ದೇನು…?

ರಾಜ್ಯದಲ್ಲಿ ಕೋವಿಡ್ ಸೋಂಕಿಗೆ ಮೊದಲ ಬಲಿ…! ಸಚಿವರು ಹೇಳಿದ್ದೇನು…?

ಬೆಂಗಳೂರು : ರಾಜ್ಯದಲ್ಲಿ ಸಧ್ಯ ಕೊರೊನಾ ವೈರಸ್ ಆತಂಕ ಹೆಚ್ಚಾಗುತ್ತಿದ್ದು, ಕೆರಳ ಗಡಿ ಭಾಗ ಹೊಂದಿಕೊಂಡ ರಾಜ್ಯ ಕೆಲ ಜಿಲ್ಲೆಗಳಲ್ಲಿ ವೈರಸ್ ಆರ್ಭಟ ಹೆಚ್ಚಾಗಿದೆ‌‌. ಈ ನಡುವೆ ಚಾಮರಾಜನಗರದ 64 ವರ್ಷದ ವೃದ್ಧ ಖಾಸಗಿ ಆಸ್ಪತ್ರೆಯಲ್ಲಿ ಸಾವಣಪ್ಪಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ನಿನ್ನೆ ಕೊರೊನಾ ವೈರಸ್ ಸೋಂಕಿ​ಗೆ 64 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೋವಿಡ್​ ಪರಿಸ್ಥಿತಿ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಪಡೆದಿದೆ. ದೇಶದಲ್ಲಿ 20 JN.1 ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವರ ಸಭೆಯ ಬಳಿಕ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದರು.

ಕೇಂದ್ರ ಆರೋಗ್ಯ ಸಚಿವ ಮುನ್ಸುಖ್ ಮಾಂಡವೀಯ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದು, ಅದರಲ್ಲಿ ಗುಂಡೂರಾವ್ ಭಾಗವಹಿಸಿದ್ದಾರೆ.

ಕೋವಿಡ್ ಕುರಿತು ಗುರುವಾರ ತಾಂತ್ರಿಕ ಸಲಹಾ ಸಮಿತಿ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಆ ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚಿಸುತ್ತೇವೆ ಎಂದು ಗುಂಡೂರಾವ್ ತಿಳಿಸಿದರು.

ಕಳೆದ ಬಾರಿ ಶೇ 90ರಷ್ಟು ಜನರು ಹೋಂ ಕ್ವಾರಂಟೈನ್​ನಲ್ಲಿ ಇದ್ದರು. ಟೆಸ್ಟಿಂಗ್ ಕಿಟ್, ಮಾಸ್ಕ್, ಔಷಧ ವಿತರಣೆಗೆ ಸಿದ್ಧತೆ ಮಾಡಿಕೊಂಡಿದ್ದೇವೆ. ಖಾಸಗಿ ಆಸ್ಪತ್ರೆಗಳಿಗೂ ದರ ನಿಗದಿ ಸಂಬಂಧ ನಾಳೆ ಚರ್ಚೆ ಆಗಲಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ಆರ್​ಟಿ-ಪಿಸಿಆರ್ ಟೆಸ್ಟ್ ದರದ ಬಗ್ಗೆ ಚರ್ಚೆ ಮಾಡುತ್ತೇವೆ. ಸದ್ಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಆರ್​ಟಿ-ಇಸಿಆರ್ ಟೆಸ್ಟ್ ಉಚಿತ ಇದೆ. ರಾಜ್ಯದಲ್ಲಿ ನಿತ್ಯ ಐದು ಸಾವಿರ ಟೆಸ್ಟಿಂಗ್ ಮಾಡುತ್ತೇವೆ ಎಂದು ಗುಂಡೂರಾವ್ ಹೇಳಿದರು.

Advertisement

Leave a reply

Your email address will not be published. Required fields are marked *

error: Content is protected !!